ನ್ಯೂಸ್ ನಾಟೌಟ್ :ಕೆಲ ದಿನಗಳಿಂದ ಶಬರಿಮಲೆ ಸುತ್ತ ಮುತ್ತ ಮಳೆಯಾಗುತ್ತಿದ್ದು ಇದರ ನಡುವೆ ಹಾವುಗಳು ರಸ್ತೆಗಳಲ್ಲಿ ಕಂಡುಬರುತ್ತಿವೆ ಎಂದು ವರದಿಯಾಗಿದೆ.ಈ ಮಧ್ಯೆ ಕೇರಳದ ಪ್ರಸಿದ್ಧ ಪುಣ್ಯಕ್ಷೇತ್ರಗಳಲ್ಲೊಂದಾದ ಶಬರಿಮಲೆ ದೇವಸ್ಥಾನದ ಸುತ್ತಮುತ್ತ ವಿಷಪೂರಿತ ಹಾವುಗಳು ಇದ್ದು, ಗುರುವಾರ ಬೆಳಗ್ಗಿನ ವೇಳೆ ಸ್ವಾಮಿ ದರ್ಶನಕ್ಕೆ ಬಂದಿದ್ದ ಆರು ವರ್ಷದ ಬಾಲಕಿಗೆ ಹಾವೊಂದು ಕಚ್ಚಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ತಕ್ಷಣ ಎಚ್ಚೆತ್ತ ಅಧಿಕಾರಿಗಳು ಮಗುವನ್ನು ಹತ್ತಿರದ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂದು ತಿಳದು ಬಂದಿವೆ.
ಕೇರಳ ರಾಜ್ಯದ ತಿರುವನಂತಪುರಂ ಜಿಲ್ಲೆಯ ಆರು ವರ್ಷದ ಬಾಲಕಿ ನಿರಂಜನ ಎಂಬಾಕೆ ತನ್ನ ಕುಟುಂಬ ಸದಸ್ಯರೊಂದಿಗೆ ಅಯ್ಯಪ್ಪ ದೇವರ ದರ್ಶನಕ್ಕೆಂದು ಶಬರಿಮಲೆಗೆ ತೆರಳಿದ್ದಳು. ಬೆಳಗಿನ ಜಾವ ಸರಿಸುಮಾರು 4 ಗಂಟೆ ಇರಬಹುದು. ಅಯ್ಯಪ್ಪನ ರಸ್ತೆಯ ಮುಂಭಾಗದಲ್ಲಿಯೇ ಹಾವೊಂದು ಪ್ರತ್ಯಕ್ಷವಾಗುದೆ. ಮಾತ್ರವಲ್ಲ ಬಾಲಕಿಗೆ ಕಚ್ಚಿದೆ.ಈ ವೇಳೆ ತಕ್ಷಣ ಸ್ಪಂದಿಸಿದ ದೇವಸ್ಥಾನದ ಅಧಿಕಾರಿಗಳು ಬಾಲಕಿಯನ್ನು ಪಂಬಾ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ತಿಳದು ಬಂದಿದೆ. ಅಲ್ಲಿ ಮಗುವಿಗೆ ತುರ್ತು ಚಿಕಿತ್ಸೆ ನೀಡಲಾಯಿತು ಎಂದು ವರದಿ ತಿಳಿಸಿದೆ. ನಂತರ ಉತ್ತಮ ಚಿಕಿತ್ಸೆಗಾಗಿ ಕೊಟ್ಟಾಯಂ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಯಿತು. ಮಗುವಿನ ಸ್ಥಿತಿ ಈಗ ಸ್ಥಿರವಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಈ ಘಟನೆ ಬಳಿಕ ದೇವಾಸ್ಥಾನದ ಅಧಿಕಾರಿಗಳು ಎಚ್ಚೆತ್ತುಕೊಂಡಿದ್ದು,ದೇವಸ್ಥಾನದ ಆವರಣದಲ್ಲಿ ಹೆಚ್ಚಿನ ಹಾವು ಹಿಡಿಯುವವರನ್ನು ನೇಮಿಸಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಘಟನೆಯ ಗಂಭೀರತೆ ನಮಗೂ ಅರ್ಥವಾಗಿದೆ.ಇದನ್ನು ಗಮನದಲ್ಲಿಟ್ಟುಕೊಂಡು ಇನ್ನಿಬ್ಬರು ಹಾವು ಹಿಡಿಯುವವರನ್ನು ನೇಮಿಸಲು ಅಧಿಕಾರಿಗಳು ಆದೇಶಿಸಿದ್ದಾರೆಂದು ತಿಳಿದು ಬಂದಿದೆ. ಮಳೆಯಿಂದಾಗಿ ದೇವಸ್ಥಾನಕ್ಕೆ ಬರುವ ಭಕ್ತಾದಿಗಳೆಲ್ಲರೂ ಎಚ್ಚರಿಕೆಯಿಂದ ಇರುವಂತೆಯೂ ಸೂಚಿಸಲಾಗಿದೆ.