ನ್ಯೂಸ್ ನಾಟೌಟ್: ಸಚಿವ ಸಂಪುಟದಲ್ಲಿ ಡಿಕೆಶಿ ಸಿಬಿಐ ಕೇಸ್ ವಾಪಸ್ ಪಡೆದ ವಿಚಾರವಾಗಿ ಮಂಗಳೂರಿನಲ್ಲಿ ಪ್ರತಿಕ್ರಿಯಿಸಿದ ಸಂಸದ ನಳಿನ್ ಕುಮಾರ್ ಕಟೀಲ್, ಇವರು ಪ್ರಾಮಾಣಿಕರು, ಪಾರದರ್ಶಕವಾಗಿದ್ದರೆ ಕೇಸ್ ಹಿಂಪಡೆಯುವ ಅಗತ್ಯವಿಲ್ಲ. ಇವರಿಗೆ ಭಯ ಯಾಕೆ, ಇವರ ಪ್ರಾಮಾಣಿಕತೆ ಪ್ರಶ್ನಾರ್ಥಕ ಚಿಹ್ನೆಯಲ್ಲಿದೆ ಎಂದು ಹೇಳಿದರು.
ಸಿಬಿಐ ತನಿಖೆ ಹೊತ್ತಲ್ಲಿ ಸರ್ಕಾರ ಕೇಸ್ ವಾಪಸ್ ಪಡೆಯುವುದು ಸರಿಯಲ್ಲ. ಇದು ಸರ್ಕಾರದ ಭ್ರಷ್ಟಾಚಾರವನ್ನು ಸಾರ್ವಜನಿಕವಾಗಿ ತಿಳಿಸುತ್ತದೆ. ಇದನ್ನು ನಾನು ಖಂಡಿಸುತ್ತೇನೆ. ಹಾಗಂತ ಇದೊಂದೇ ಕೇಸ್ ಇಲ್ಲ, ಜಾರಿ ನಿರ್ದೇಶನಾಲಯದಲ್ಲೂ ಸಾಕಷ್ಟು ಕೇಸ್ಗಳಿವೆ ಎಂದು ನಳಿನ್ ಕುಮಾರ್ ಕಟೀಲು ಹೇಳಿದರು.
ಕಾನೂನು ವ್ಯವಸ್ಥೆಯ ಅಣಕ ಮಾಡುವುದು ಕೆಲ ಪ್ರಭಾವಿ ರಾಜಕಾರಣಿಗಳಿಗೆ ಅಭ್ಯಾಸ ಆಗಿರುವುದು ದುರಂತ. ಸಚಿವ ಸಂಪುಟದಲ್ಲಿರುವ ಯಾವುದೇ ಸಚಿವರು ಇದು ಚರ್ಚೆಯಾಗಬೇಕು ಎಂದು ಹೇಳದೇ, ಇದಕ್ಕೆ ಒಪ್ಪಿಗೆ ನೀಡಿರುವುದು ಹಲವು ಸಂಶಯಗಳನ್ನು ಹುಟ್ಟು ಹಾಕುತ್ತದೆ. ಇವರು ಯಾವುದೇ ತಪ್ಪು ಮಾಡಿಲ್ಲ ಎಂದರೆ, ಸಿಬಿಐ ಮೇಲೆ ಭಯ ಏಕೆ? ಎಂದು ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ.