ನ್ಯೂಸ್ ನಾಟೌಟ್: ಅಕಾಲಿಕ ಮಳೆ ವೇಳೆ ಸಿಡಿಲು ಬಡಿದು 20 ಮಂದಿ ಸಾವನ್ನಪ್ಪಿದ ಘಟನೆ ಗುಜರಾತ್ನಲ್ಲಿ (Gujarat)ನಲ್ಲಿ ನಡೆದಿದೆ. ಜೊತೆಗೆ ಕೆಲವರು ಗಾಯಗೊಂಡಿದ್ದಾರೆ ಎಂದು ವರದಿ ತಿಳಿಸಿದೆ.
ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಹಾನಿಗೊಳಗಾದ ಮತ್ತು ಮೃತರ ಕುಟುಂಬಗಳಿಗೆ ಸಾಂತ್ವನ ಹೇಳಿದ್ದಾರೆ. ಗುಜರಾತ್ನ ವಿವಿಧ ನಗರಗಳಲ್ಲಿ ಪ್ರತಿಕೂಲ ಹವಾಮಾನ ಮತ್ತು ಸಿಡಿಲಿನಿಂದ ಅನೇಕರು ಕೊನೆಯುಸಿರೆಳೆದಿದ್ದಾರೆ. ಇದನ್ನು ಕೇಳಿ ಅತೀವ ದುಃಖವಾಗಿದೆ. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರಿಗೆ ತುಂಬಲಾರದ ನಷ್ಟವಾಗಿದೆ. ಅದಕ್ಕೆ ನಾನು ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಶಾ ಸಂತಾಪ ಸೂಚಿಸಿದ್ದಾರೆ.
ಸದ್ಯ ಗಾಯಾಳುಗಳನ್ನು ಆಸ್ಪತ್ರೆಗೆ (Hospital) ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳೀಯ ಆಡಳಿತ ಮಂಡಳಿ ಮೃತರ ಕುಟುಂಬಗಳಿಗೆ ಪರಿಹಾರ ಒದಗಿಸುವ ಕಾರ್ಯದಲ್ಲಿ ತೊಡಗಿದೆ ಎನ್ನಲಾಗಿದೆ. ಅಲ್ಲದೇ ಹಲವು ಪ್ರದೇಶಗಳಲ್ಲಿ ಬೆಳೆ ಹಾನಿಯಾಗಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಗುಜರಾತ್ನ 252 ತಾಲೂಕುಗಳ ಪೈಕಿ 234 ತಾಲೂಕುಗಳಲ್ಲಿ ಭಾನುವಾರ ಮಳೆಯಾಗಿದೆ ಎಂದು ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರ ಮಾಹಿತಿ ಒದಗಿಸಿದೆ.