ನ್ಯೂಸ್ ನಾಟೌಟ್ :ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ 21 ಮಂದಿಯನ್ನು ಪೊಲೀಸರು ಬಂಧಿಸಿ ಚಳಿ ಬಿಡಿಸಿರುವ ಘಟನೆ ಮಡಿಕೇರಿಯಲ್ಲಿ ನಡೆದಿದೆ. ಇವರು ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು,21 ಆರೋಪಿಗಳಿಗೆ ನ್ಯಾಯಾಲಯ ಸಮನ್ಸ್ ನೀಡಿದ್ದರೂ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದರು.ಈ ಹಿನ್ನಲೆಯಲ್ಲಿ 21 ಮಂದಿ ಆರೋಪಿಗಳನ್ನು ಮಡಿಕೇರಿ ಗ್ರಾಮಂತರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ಇಂದು ಮುಂಜಾನೆ ವೇಳೆಯಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು ಮಡಿಕೇರಿಯ ವಿವಿಧ ಕಾಫಿ ಎಸ್ಟೇಟ್ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ.ಈ ವೇಳೆ ಕಳ್ಳತನ ಹಾಗೂ ಚೆಕ್ ಬೌನ್ಸ್ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 21 ಜನರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಂಧಿಸಲಾದ ಆರೋಪಿಗಳಿಗೆ ಹಲವು ಬಾರಿ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಲಾಗಿತ್ತು, ಆದರೂ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುತ್ತಿರಲಿಲ್ಲ ಎಂದು ವರದಿ ತಿಳಿಸಿದೆ.