ನ್ಯೂಸ್ ನಾಟೌಟ್: ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯನ್ನು (Teacher) ಸಿನಿಮೀಯ ರೀತಿಯಲ್ಲಿ ಅಪಹರಿಸಿರುವ (Kidnap) ಘಟನೆ ಹಾಸನ (Hassan) ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ಇಂದು(ನ.೩೦) ನಡೆದಿದೆ.
15 ದಿನಗಳ ಹಿಂದೆ ಮದುವೆ ಪ್ರಸ್ತಾಪದೊಂದಿಗೆ ಶಿಕ್ಷಕಿ ಅರ್ಪಿತಾ ಮನೆಗೆ, ಸಂಬಂಧಿ ರಾಮು ಮತ್ತು ಪೋಷಕರು ಬಂದಿದ್ದರು. ಮದುವೆ ಪ್ರಸ್ತಾಪಕ್ಕೆ ಶಿಕ್ಷಕಿ ಅರ್ಪಿತಾ ಹಾಗೂ ಪೋಷಕರು ಒಪ್ಪಿರಲಿಲ್ಲ ಎನ್ನಲಾಗಿದೆ.
ಮದುವೆ ಒಪ್ಪದ ಹಿನ್ನೆಲೆಯಲ್ಲಿ ಇಂದು (ನ.30) ಬೆಳಗ್ಗೆ ಅರ್ಪಿತಾಳನ್ನು ರಾಮು ಅಪಹರಿಸಿರುವುದಾಗಿ ಆರೋಪಿಸಲಾಗಿದೆ.
ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
‘ನಿಮ್ಮ ಮಗಳನ್ನು ಮದವೆ ಮಾಡಿಕೊಡಿ ಎಂದು ರಾಮು ಮತ್ತು ಆತನ ಪೋಷಕರು ಕೇಳಲು ಬಂದಿದ್ದರು. ಆದರೆ ನಾವು ಕೊಡಲ್ಲ ಅಂತ ಹೇಳಿ ಕಳಿಸಿದ್ವಿ. ಕೊಡಲ್ಲ ಅಂದಿದ್ದಕ್ಕೆ ನನ್ನ ಮಗಳನ್ನ ಅಪರಣ ಮಾಡಿದ್ದಾರೆ’ ಎಂದು ಅರ್ಪಿತಾ ತಾಯಿ ಹೇಳಿಕೆ ನೀಡಿದ್ದಾರೆ.