ನ್ಯೂಸ್ ನಾಟೌಟ್ :ಶಾಲೆಗೆ ತೆರಳುತ್ತಿದ್ದ ಶಿಕ್ಷಕಿಯನ್ನು (Teacher) ಸಿನಿಮೀಯ ರೀತಿಯಲ್ಲಿ ಅಪಹರಿಸಿರುವ (Kidnap) ಘಟನೆ ಹಾಸನದಿಂದ ವರದಿಯಾಗಿತ್ತು.ಹಾಡಹಗಲೇ ಜನ ಇರುವ ಪ್ರದೇಶದಲ್ಲೇ ಈ ಘಟನೆ ನಡೆದಿದ್ದು,ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿತ್ತು.ಇದೀಗ ಅಪಹರಣಕಾರರನ್ನು ಪತ್ತೆ ಹಚ್ಚಿರುವ ಪೊಲೀಸರು ಕಡಬ ತಾಲೂಕಿನ ನೆಲ್ಯಾಡಿ ಬಳಿ ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
15 ದಿನಗಳ ಹಿಂದೆ ಮದುವೆ ಪ್ರಸ್ತಾಪದೊಂದಿಗೆ ಶಿಕ್ಷಕಿ ಅರ್ಪಿತಾ ಮನೆಗೆ, ಸಂಬಂಧಿ ರಾಮು ಮತ್ತು ಪೋಷಕರು ಬಂದಿದ್ದರು. ಮದುವೆ ಪ್ರಸ್ತಾಪಕ್ಕೆ ಶಿಕ್ಷಕಿ ಅರ್ಪಿತಾ ಹಾಗೂ ಪೋಷಕರು ಒಪ್ಪಿರಲಿಲ್ಲ ಎನ್ನಲಾಗಿದೆ.ಮದುವೆ ಒಪ್ಪದ ಹಿನ್ನೆಲೆಯಲ್ಲಿ ನಿನ್ನೆ (ನ.30) ಬೆಳಗ್ಗೆ ಅರ್ಪಿತಾಳನ್ನು ರಾಮು ಎಂಬಾತ ತನ್ನ ಗೆಳೆಯರ ಜೊತೆ ಸೇರಿ ಇನ್ನೋವಾ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿದ್ದನು ಎಂಬ ಆರೋಪ ಕೇಳಿ ಬಂದಿತ್ತು.
ಇದೀಗ ನೆಲ್ಯಾಡಿ ಬಳಿ ಕಿಡ್ನ್ಯಾಪ್ ಮಾಡಿದ ಆರೋಪಿಗಳನ್ನು ಪತ್ತೆ ಹಚ್ಚಿದ ಹಾಸನ ಪೊಲೀಸರು ವಶಕ್ಕೆ ಪಡೆದು, ಅಪಹರಣಕ್ಕೊಳಗಾದ ಶಾಲಾ ಶಿಕ್ಷಕಿಯನ್ನು ಹಾಸನಕ್ಕೆ ಕರೆದೊಯ್ದಿದ್ದಾರೆ.ಹಾಸನ ನಗರ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಾಗಿತ್ತು.
‘ನಿಮ್ಮ ಮಗಳನ್ನು ಮದುವೆ ಮಾಡಿಕೊಡಿ ಎಂದು ರಾಮು ಮತ್ತು ಆತನ ಪೋಷಕರು ಕೇಳಲು ಬಂದಿದ್ದರು. ಆದರೆ ನಾವು ಕೊಡಲ್ಲ ಅಂತ ಹೇಳಿ ಕಳಿಸಿದ್ವಿ. ಕೊಡಲ್ಲ ಅಂದಿದ್ದಕ್ಕೆ ನನ್ನ ಮಗಳನ್ನ ಅಪರಣ ಮಾಡಿದ್ದಾರೆ’ ಎಂದು ಅರ್ಪಿತಾ ತಾಯಿ ಹೇಳಿಕೆ ನೀಡಿದ್ದರು.