ನ್ಯೂಸ್ ನಾಟೌಟ್: ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರದ ಸಚಿವರೊಬ್ಬರ ವಿರುದ್ದ ಅವರ ಪಕ್ಷದ ಶಾಸಕರೇ ಗರಂ ಆಗಿದ್ದಾರೆ. ಸಚಿವ ಮಧು ಬಂಗಾರಪ್ಪಅವರಿಗೆ ಅಹಂ ಜಾಸ್ತಿಯಾಗಿದೆ. ಅಧಿಕಾರದ ದಾಹದಿಂದ ಕ್ಷೇತ್ರದ ಶಾಸಕರನ್ನು ಕಡೆಗಣಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಎಲ್ಲಾ ಉಸ್ತುವಾರಿ ಸಚಿವರು ಸರಿಯಾಗಿದ್ದಾರೆ. ಆದರೆ ನಮ್ಮ ಉಸ್ತುವಾರಿ ಸಚಿವರಿಗೆ ಅಹಂ ಜಾಸ್ತಿ ಆಗಿದೆ. ಪಿತ್ತ ನೆತ್ತಿಗೆ ಏರಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಎಲ್ಲಾ ವಿಚಾರದಲ್ಲೂ ಮೂಗು ತೂರಿಸುತ್ತಾರೆ. ನಾವು ಕೂಡ ಶಾಸಕರು ನಮಗೂ ಜವಬ್ದಾರಿ ಇಲ್ವಾ ಎಂದು ಪ್ರಶ್ನಿಸಿದ್ದಾರೆ. ನಾವು ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ.ವೈ. ರಾಘವೇಂದ್ರ ಅವರನ್ನು ಸೋಲಿಸಬೇಕು ಅಂತ ಇದ್ದೇವೆ. ಆದರೆ ನಮ್ಮ ಸಚಿವರು ನಮ್ಮಲ್ಲೆ ಒಡಕು ಮೂಡಿಸುತ್ತಿದ್ದಾರೆ. ಮಧು ಬಂಗಾರಪ್ಪ ಅವರು ಮಾಜಿ ಮುಖ್ಯಮಂತ್ರಿ ಮಗ. ನಾವೆಲ್ಲ ಅವರ ತಂದೆ ಗರಡಿಯಲ್ಲಿ ಪಳಗಿದವರು. ಎಲ್ಲರನ್ನು ಒಗ್ಗೂಡಿಸಿ ಕರೆದುಕೋಡು ಹೋಗಬೇಕು. ಅವರೆ ಪಕ್ಷವನ್ನ ಒಡೆಯುವುದಲ್ಲ ಎಂದಿದ್ದಾರೆ. ಶಿವಮೊಗ್ಗದಲ್ಲಿ ಪಕ್ಷ ಒಡೆದು ಎರಡು ಬಣವಾಗಿದೆ. ಅವರೇ ಅದಕ್ಕೆ ಕುಮ್ಮಕ್ಕು ನೀಡುವುದಲ್ಲ. ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಅನ್ನೋದು ಹೈ ಕಮಾಂಡ್ ತೀರ್ಮಾನ ಮಾಡುತ್ತದೆ. ನಾನು ಒಬ್ಬ ಪ್ರಬಲ ಆಕಾಂಕ್ಷಿ ಎಂದು ಗೋಪಾಲಕೃಷ್ಣ ಹೇಳಿದರು.