ನ್ಯೂಸ್ ನಾಟೌಟ್: ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ವತಿಯಿಂದ ಶ್ರೀ ಆದಿಚುಂಚನಗಿರಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ 26ನೇ ರಾಜ್ಯ ಮಟ್ಟದ ಚುಂಚಾದ್ರಿ ಕ್ರೀಡೋತ್ಸವ ಡಿಸೆಂಬರ್ 2ರಂದು ಅದ್ದೂರಿಯಾಗಿ ಸಂಪನ್ನಗೊಂಡಿತು. ಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಪರಮಪೂಜ್ಯ ಜಗದ್ಗುರು ಶ್ರೀ ಡಾ॥ ನಿರ್ಮಲಾನಂದನಾಥ ಮಹಾಸ್ವಾಮೀಜಿ ಪ್ರಶಸ್ತಿ, ಫಲಕ ನೀಡಿ ಆಶೀರ್ವದಿಸಿದರು.
ಕಾರ್ಯಕ್ರಮದಲ್ಲಿ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ, ಶ್ರೀ ಸೋಮೇಶ್ವರನಾಥ ಸ್ವಾಮೀಜಿ, ಶ್ರೀ ಧರ್ಮಪಾಲನಾಥ ಸ್ವಾಮೀಜಿ, ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಮತ್ತು ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಆಡಳಿತಾಧಿಕಾರಿಗಳು, ಪ್ರಾಂಶುಪಾಲರು, ಮುಖ್ಯೋಪಾಧ್ಯಾಯರು, ಸಿಬ್ಬಂದಿ ವರ್ಗದವರು ಹಾಗೂ ಕ್ರೀಡಾಭಿಮಾನಿಗಳು ಉಪಸ್ಥಿತರಿದ್ದರು.