ನ್ಯೂಸ್ ನಾಟೌಟ್ : ಚಿನ್ನವನ್ನು ಮಾರಾಟ ಮಾಡುವ ಜ್ಯುವೆಲ್ಸ್ ಮಳಿಗೆಗಳನ್ನು ನೋಡಿದ್ದೇವೆ. ಆದರೆ ಚಿನ್ನವನ್ನು ಮಾರಾಟ ಮಾಡುವುದರ ಜೊತೆಗೆ ಅದರಲ್ಲಿ ಬರುವ ಸ್ವಲ್ಪ ಪಾಲನ್ನೂ ಸಮಾಜಕ್ಕೂ ಮೀಸಲಿಡುವ ಮೂಲಕ ನಾಡಿನ ಹೆಸರಾಂತ ಆಭರಣ ಮಳಿಗೆ ಮುಳಿಯ ಜ್ಯುವೆಲ್ಸ್ ಸದ್ದು ಮಾಡಿದೆ.
ಹೌದು, ಮುಳಿಯ ಜ್ಯುವೆಲ್ಸ್ ನಲ್ಲಿ ಇಂದು (ಗುರುವಾರ) ಸಂಸ್ಥಾಪಕರ ದಿನವನ್ನ ಆಚರಿಸಲಾಯಿತು. ಪುತ್ತೂರು, ಬೆಳ್ತಂಗಡಿ, ಗೋಣಿಕೊಪ್ಪಲ್, ಮಡಿಕೇರಿ ಮತ್ತು ಬೆಂಗಳೂರಿನಲ್ಲಿ ಮಳಿಗೆಗಳನ್ನು ಹೊಂದಿರುವ ಮುಳಿಯ ಜ್ಯುವೆಲ್ಸ್ ಸಂಸ್ಥೆ ಕಳೆದ 78 ವರ್ಷಗಳಿಂದ ನಿರಂತರ ಗ್ರಾಹಕರ ಜೊತೆಗೆ ಸ್ವರ್ಣ ಸಂಬಂಧವನ್ನು ಇರಿಸಿಕೊಂಡಿದೆ. ಇದೀಗ ಆಭರಣದ ಜೊತೆಗೆ ಸಾಮಾಜಿಕ ಕಳಕಳಿಯ ಸ್ಪರ್ಶವನ್ನು ನೀಡಿದೆ.
ಸಂಸ್ಥಾಪಕರ ದಿನಾಚರಣೆ ಅಂಗವಾಗಿ ಡಿಸೆಂಬರ್ 7, 8 ಮತ್ತು 9ರಂದು ಗ್ರಾಹಕರು ಮುಳಿಯ ಜ್ಯುವೆಲ್ಸ್ ನಲ್ಲಿ ಖರೀದಿಸುವ ಪ್ರತಿ ಗ್ರಾಂ ಚಿನ್ನದಲ್ಲಿ 50 ರೂ.ಗಳನ್ನು ಸಾಮಾಜಿಕ ಉದ್ದೇಶಗಳಿಗೆ ವಿನಿಯೋಗಿಸಲಿದ್ದಾರೆ. ಗ್ರಾಹಕರು ಹೇಗೆ ಮುಖ್ಯವೋ ಹಾಗೆಯೇ ಸಂಸ್ಥಾಪಕರು ಕೂಡ ಮುಖ್ಯ. ಅವರ ಆಶಯಕ್ಕೆ ಅನುಗುಣವಾಗಿ ಸಂಸ್ಥೆಯನ್ನು ಸಮಾಜಮುಖಿಯಾಗಿ ಮುನ್ನಡೆಸುವುದು ನಮ್ಮ ಧ್ಯೇಯ. ನಮ್ಮ ಲಾಭಾಂಶದಲ್ಲಿ ಒಂದು ಅಂಶವನ್ನು ಸಮಾಜಮುಖಿ ಕಾರ್ಯಗಳಿಗೆ ವಿನಿಯೋಗಿಸುತ್ತೇವೆ. ಆ ಮೂಲಕ ಅವರ ಸೇವಾ ಮನೋಭಾವವನ್ನು ಮುಂದುವರಿಸಲು ನಾವು ಬದ್ಧರಾಗಿದ್ದೇವೆ ಎಂದು ಮುಳಿಯ ಜ್ಯುವೆಲ್ಸ್ ಸಂಸ್ಥೆಯ ಸಿಎಂಡಿ ಕೇಶವ ಪ್ರಸಾದ್ ಮುಳಿಯ ತಿಳಿಸಿದ್ದಾರೆ. ದಿವಂಗತ ಮುಳಿಯ ಕೇಶವ ಭಟ್ಟರು ಸ್ಥಾಪಿಸಿದ ಮುಳಿಯ ಜ್ಯುವೆಲ್ಸ್ ಸಂಸ್ಥೆ ಸಾಮಾಜಿಕ ಕಳಕಳಿಯ ಸ್ವರ್ಣ ಪರಂಪರೆಯಲ್ಲಿ ಇಂದು ಬೃಹತ್ತಾಗಿ ಬೆಳೆದಿದೆ.