ಸುಳ್ಯ

ಸುಳ್ಯ: ಡಿ. 17ಕ್ಕೆ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ 67ನೇ ಪರಿನಿಬ್ಬಾಣ ದಿನಾಚರಣೆ, ನೂತನ ತಾಲೂಕು ಸಮಿತಿ ರಚನೆ ಹಾಗೂ ಸಾಧಕರಿಗೆ ಸನ್ಮಾನ

ನ್ಯೂಸ್ ನಾಟೌಟ್: ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 67ನೇ ಪರಿನಿಬ್ಬಾಣ ದಿನಾಚರಣೆ, ನೂತನ ತಾಲೂಕು ಸಮಿತಿ ರಚನೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವು ಡಿ. 17ರಂದು ನಡೆಯಲಿದೆ.

ಈ ಬಗ್ಗೆ ಶನಿವಾರ ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಕರಾದಸಂಸ (ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ) ಮಂಗಳೂರು ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಮಾತನಾಡಿ, ‘ಅಂಬೇಡ್ಕರ್ ಅವರ 67 ನೇ ಪರಿನಿಬ್ಬಾಣ ದಿನಾಚರಣೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಬೆಳಿಗ್ಗೆ 10:30 ಕ್ಕೆ ನಡೆಯಲಿದೆ. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಗಳೂರು ಕರಾದಸಂಸ ಜಿಲ್ಲಾ ಸಂಚಾಲಕ ಯು.ಕೆ. ಗಿರೀಶ್ ಕುಮಾರ್ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದ ಉದ್ಘಾಟನೆಯನ್ನು ದಲಿತಪರ ಚಿಂತಕ ರಮೇಶ್ ಕೋಟೆ ಮಾಡಲಿದ್ದಾರೆ.

ನಿವೃತ್ತ ಸೈನಿಕ ಕೊರಗಪ್ಪ ಕೆ. ಕೊನ್ನಡ್ಕ ಬಳ್ಪ ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಲಿದ್ದಾರೆ. ಕರಾದಸಂಸ ಮಂಗಳೂರು ಜಿಲ್ಲಾ ಸಂಘಟನಾ ಸಂಚಾಲಕ ಆನಂದ ಬೆಳ್ಳಾರೆ ಪ್ರಾಸ್ತಾವಿಕ ಮಾತುಗಳನ್ನು ಆಡಲಿದ್ದಾರೆ. ಪಂಜದ ನಿವೃತ್ತ ಪಶುವೈದ್ಯಾಧಿಕಾರಿ ಡಾ. ದೇವಿಪ್ರಸಾದ್ ಕಾನತ್ತೂರು ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿರಲಿದ್ದಾರೆ. ಸಭಾ ಕಾರ್ಯಕ್ರಮದ ಬಳಿಕ ಸುಳ್ಯ ತಾಲೂಕು ಸಮಿತಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗುತ್ತದೆ. ಸುಳ್ಯ ತಾಲೂಕು ಮತ್ತು ಕಡಬ ತಾಲೂಕಿನಿಂದ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾದ ಕ್ರೀಡಾಪಟುಗಳಿಗೆ , ಸಮಾಜ ಸೇವಕರಿಗೆ, ಜಾನಪದ ಕಲಾಗಾರರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

Related posts

ಭಕ್ತರ ಪಾಲಿನ ಭಾಗೀರಥಿ ಶ್ರೀ ಕ್ಷೇತ್ರ ಪೆರುವಾಜೆಯ ಜಲದುರ್ಗಾದೇವಿ,ಜನವರಿ 16 ರಿಂದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ವಾರ್ಷಿಕ ಜಾತ್ರೆ ಹಾಗೂ ರಥ ಸಮರ್ಪಣೆ

ಸುಳ್ಯದಲ್ಲಿ ತಂಬಾಕು, ಗುಟ್ಕಾ ಮಾರಾಟ ವಿರುದ್ಧ ಮಿಂಚಿನ ಕಾರ್ಯಾಚರಣೆ

ಸುಳ್ಯ : NMC ಯಲ್ಲಿ NCC ವತಿಯಿಂದ ಶಿಕ್ಷಕರ ದಿನಾಚರಣೆ – ಸಾಧಕರಿಗೆ ಸನ್ಮಾನ