ನ್ಯೂಸ್ ನಾಟೌಟ್: ಧಾರ್ಮಿಕ ಸಾಮರಸ್ಯ ಎಂದರೆ ಅಸಮಾನತೆಯ ಸಂರಕ್ಷಣೆ. ಆದ್ದರಿಂದ ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದು ನಟ ಚೇತನ್ ಅಹಿಂಸಾ ಚೇತನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಈ ಕುರಿತು ಟ್ವಿಟ್ಟರ್ ಎಕ್ಸ್ ನಲ್ಲಿ ಬರೆದುಕೊಂಡಿರುವ ನಟ, ” ಗಾಂಧಿಯವರ ‘ಧಾರ್ಮಿಕ ಸಾಮರಸ್ಯ’ ಇಂದಿನ ಅಗತ್ಯ ಎಂದು ಪ್ರತಿಪಾದಿಸುವ ಉದಾರವಾದಿಗಳಿಗೆ ನಮ್ಮ ಸಾಂವಿಧಾನಿಕ ತತ್ವಗಳು ಅರ್ಥವಾಗುತ್ತಿಲ್ಲ.
ಖಾಸಗಿಯಾಗಿ, ನಾವೆಲ್ಲರೂ ಧರ್ಮದ ಹಕ್ಕನ್ನು ಹೊಂದಿದ್ದೇವೆ (ಆರ್ಟಿಕಲ್ 25); ಸಾರ್ವಜನಿಕವಾಗಿ, ನಾವು ಜಾತ್ಯತೀತ ರಾಷ್ಟ್ರ – ಅಂದರೆ ಧರ್ಮದಿಂದ ದೂರ ಇರುವುದಾಗಿದೆ, ಹಾಗೂ ಧಾರ್ಮಿಕ ಸಾಮರಸ್ಯ ಎಂದರೆ ಅಸಮಾನತೆಯ ಸಂರಕ್ಷಣೆ ಆದ್ದರಿಂದ ಗಾಂಧಿವಾದವನ್ನು ಕಿತ್ತೊಗೆಯಬೇಕು ಎಂದು ವಿವಾದಾತ್ಮಕ ಪೋಸ್ಟ್ ಯೊಂದನ್ನು ಹಂಚಿಕೊಂಡಿದ್ದಾರೆ.
ಈ ಬಗ್ಗೆ ಹಲವರು ಪರ ವಿರೋಧ ಚರ್ಚೆ ಮಾಡುತ್ತಿದ್ದು, ಚೇತನ್ ಪೋಸ್ಟ್ ಭಾರಿ ವಿವಾದಕ್ಕೆ ಕಾರಣವಾಗಿದೆ.