ಚೆನ್ನೈ: ಕೋವಿಡ್ ಪಾಸಿಟಿವ್ ದೃಢಪಟ್ಟ ಹಿನ್ನೆಲೆಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ‘ಬಾಹುಬಲಿ ಕಟ್ಟಪ್ಪ’ ಖ್ಯಾತಿಯ ತಮಿಳು ನಟ ಸತ್ಯರಾಜ್ ಅವರು ಮುಂದಿನ ಎರಡು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಸತ್ಯರಾಜ್ ಅವರನ್ನು ಗುರುವಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಚೇತರಿಸಿಕೊಳ್ಳುತ್ತಿದ್ದು, ಮುಂದಿನ ಎರಡು ಅಥವಾ ಮೂರು ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಸತ್ಯರಾಜ್ ಆಪ್ತ ಮೂಲಗಳು ಖಚಿತಪಡಿಸಿವೆ.