ನ್ಯೂಸ್ ನಾಟೌಟ್ : ಹುಡುಗಿಯಂತೆ ನಟಿಸಿ ವ್ಯಕ್ತಿಯೊಬ್ಬರಿಗೆ 6.87 ಲಕ್ಷ ರೂ.ಗಳನ್ನು ವಂಚಿಸಿದ ಆರೋಪದ ಮೇಲೆ ಶಿವಮೊಗ್ಗದ ಯುವಕನೊಬ್ಬನನ್ನು ಸೈಬರ್ ಎಕನಾಮಿಕ್ಸ್ ಮತ್ತು ನಾರ್ಕೋಟಿಕ್ಸ್ (ಸಿಇಎನ್) ಕ್ರೈಂ ಪೊಲೀಸರು ಬಂಧಿಸಿದ ಘಟನೆ ಗುರುವಾರ(ಡಿ.15) ರಂದು ನಡೆದಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಪಟ್ಟಣದ ಬೇಕರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ ಸುಜೇಂದ್ರ (21) ಎಂಬಾತ ಸಿರಾ ಪಟ್ಟಣದ ವಿದ್ಯಾನಗರದ ನಿವಾಸಿ ಭರತ್ಕುಮಾರ್ ಎಂಬಾತನ ಜತೆ ಫೇಸ್ಬುಕ್ನಲ್ಲಿ ಫ್ರೆಂಡ್ ಶಿಪ್ ಮಾಡಿಕೊಂಡಿದ್ದ. ನಕಲಿ ಖಾತೆ ಮೂಲಕ ಹುಡುಗಿಯಂತೆ ವರ್ತಿಸುತ್ತಿದ್ದ ಎಂದು ಪೊಲೀಸ್ ತನಿಖೆಯಲ್ಲಿ ಬಯಲಾಗಿದೆ.
ಭರತ್ ಕುಮಾರ್’ಗೆ ಫೇಸ್ ಬುಕ್’ನಲ್ಲಿ ಪರಿಚಯ ಮಾಡಿಕೊಂಡ ಆರೋಪಿಗಳು ಶರ್ಮಿಳ ಮತ್ತು ದಿವ್ಯ ಎಂಬ ಹೆಸರಿನಲ್ಲಿ ಮೆಸೆಂಜರ್ ಹಾಗೂ ವಾಟ್ಸಾಪ್ ಮೂಲಕ ಚಾಟ್ ಮಾಡಿದ್ದಾನೆ. ಬಳಿಕ ಕಷ್ಟ ಇದೆ ಎಂದು ನಂಬಿಸಿ ಹಣವನ್ನು ಫೋನ್ ಪೇ, ಪೇಟಿಎಂ, ಗೂಗಲ್ ಪೇ ಹಾಗೂ ಬ್ಯಾಂಕ್ ಖಾತೆಗಳಿಗೆ ಹಾಕಿಸಿಕೊಂಡು ವಂಚಿಸಿದ್ದಾರೆ.
ಸಂತ್ರಸ್ತ ವಿದ್ಯಾರ್ಥಿಯಾಗಿದ್ದು, ಈತನ ತಂದೆ ಉದ್ಯಮಿ ಶಾಂತಕುಮಾರ್ ಎಂಬವರು ಸಿಇಎನ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣದ ತನಿಖೆ ನಡೆಸಿದ ಪೊಲೀಸರು ಡಿಸೆಂಬರ್ 12ರಂದು ಶಿವಮೊಗ್ಗ ನಗರ, ತೀರ್ಥಹಳ್ಳಿ ರಸ್ತೆ, ಶಿವಮೊಗ್ಗ ಟೌನ್ ನಿವಾಸಿ ಸುಜೇಂದ್ರ ಎಂ.ಬಿ ಎಂಬ ಆರೋಪಿಯನ್ನು ಬಂಧಿಸಿದ್ದಾರೆ ಎಮದು ವರದಿ ತಿಳಿಸಿದೆ. ಇತರೆ ಆರೋಪಿಗಳ ಬಂಧನಕ್ಕೆ ತನಿಖೆ ಮುಂದುವರಿದಿದೆ.