ನ್ಯೂಸ್ ನಾಟೌಟ್: ಸಹಕಾರಿ ಬ್ಯಾಂಕ್ಗಳ (cooperative bank) ಸಾಲ ಮೇಲಿನ ಬಡ್ಡಿ ಮನ್ನಾ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(Siddaramaiah) ಇಂದು(ಡಿ.15) ಘೋಷಿಣೆ ಮಾಡಿದ್ದು, ರಾಜ್ಯದ ಸಹಕಾರಿ ಬ್ಯಾಂಕ್ ಸಾಲಗಾರರಿಗೆ ಗುಡ್ ನ್ಯೂಸ್ ನೀಡಿದ್ದಾರೆ.
ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲಕ್ಕೆ ಸಂಬಂಧಿಸಿದಂತೆ ಅವಧಿಯೊಳಗೆ ಸಾಲ ಮರುಪಾವತಿ ಮಾಡಿದವರ ಬಡ್ಡಿ ಮನ್ನಾ ಆಗಲಿದೆ ಎಂದು ಮಾಹಿತಿ ನೀಡಿದರು.
ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ನೀಡುತ್ತಿರುವ ವೇಳೆ ಸಿಎಂ ಸಿದ್ದರಾಮಯ್ಯ ಹಲವು ಘೋಷಣೆಗಳನ್ನು ಮಾಡಿದ್ದಾರೆ.
ನಂಜುಂಡಪ್ಪ ವರದಿಯ ಅನುಷ್ಠಾನ ಹಾಗೂ ಅದರ ಫಲಶ್ರುತಿ ಅಧ್ಯಯನ ಮಾಡಲು ನುರಿತ ಅರ್ಥಶಾಸ್ತ್ರಜ್ಞರೊಬ್ಬರ ಅಧ್ಯಕ್ಷತೆಯಲ್ಲಿ ಉನ್ನತಾಧಿಕಾರ ಸಮಿತಿ ರಚನೆ ಮಾಡಲು ಇಂದು ಅಧಿವೇಷನದಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಸಮೀಪ ಸುಮಾರು 2000 ಎಕರೆ ಪ್ರದೇಶದಲ್ಲಿ ಹೊಸ ಕೈಗಾರಿಕಾ ಪ್ರದೇಶ, 500 ಎಕರೆ ಪ್ರದೇಶದಲ್ಲಿ ಫೌಂಡ್ರಿ ಕ್ಲಸ್ಟರ್ ಸ್ಥಾಪನೆ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಏರೋಸ್ಪೇಸ್ ಆಧಾರಿತ ಕೈಗಾರಿಕೆಗಳ ಬೆಳವಣಿಗೆಗೆ ವಿಶೇಷ ಒತ್ತು ಕೊಡುವಂತೆ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಸಾಲದ ಬಡ್ಡಿ ಮನ್ನಾ ಘೋಷಣೆಯನ್ನು ವಿರೋಧ ಪಕ್ಷದ ನಾಯಕ ಆರ್ ಶೋಕ್ ಟೀಕಿಸಿದ್ದು, ರೈತರು ಅವಧಿಯೊಳಗೆ ಸಾಲ ಕಟ್ಟಲ್ಲ, ನೀವು ಬಡ್ಡಿ ಮನ್ನಾ ಮಾಡಲ್ಲ. ರೈತರ ಎರಡು ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡಬೇಕು/ ಬರದಿಂದ ಕಂಗೆಟ್ಟ ರೈತರಿಗೆ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಿ ಎಂದು ಆಗ್ರಹಿಸಿದರು ಎಂದು ವರದಿ ತಿಳಿಸಿದೆ.