ನ್ಯೂಸ್ ನಾಟೌಟ್ : ಕೇರಳದಲ್ಲಿ ಕೋವಿಡ್ ಉಪ ತಳಿ ಜೆಎನ್ 1 (COVID Subvariant JN1) ಪತ್ತೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ.ನಿನ್ನೆಯಷ್ಟೇ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ ಎಂದಿದ್ದ ಸರ್ಕಾರ ಇದೀಗ ಗರ್ಭಿಣಿಯರಿಗೆ,ತಾಯಂದಿರಿಗೂ ಮಾಸ್ಕ್ ಕಡ್ಡಾಯ ಎಂದು ಹೇಳಿದೆ.
ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿ, ಸಿಇಒ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಮಾರ್ಗಸೂಚಿಯನ್ನು ರವಾನೆ ಮಾಡಲಾಗಿದೆ.ಇನ್ನು ಸಾರ್ವಜನಿಕರಿಗೆ ಸಲಹಾ ಮಾರ್ಗಸೂಚಿ ಈ ಕೆಳಕಂಡಂತಿವೆ.
- ಎಲ್ಲ ಹಿರಿಯ ನಾಗರಿಕರು (60 ವರ್ಷ ಹಾಗೂ ಮೇಲ್ಪಟ್ಟವರು),ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು (ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ ಪ್ರದೇಶಗಳಿಗೆ ತೆರಳಿದಾಗ ಮಾಸ್ಕ್ ಧರಿಸಬೇಕು
- ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ತೆರಳದಿರುವುದು ಸೂಕ್ತವಾಗಿದೆ.
- ಜ್ವರ, ಕೆಮ್ಮು, ನೆಗಡಿ, ಇತ್ಯಾದಿ ಉಸಿರಾಟದ ಸೋಂಕಿನ ಲಕ್ಷಣಗಳನ್ನು ಹೊಂದಿದವರು ತಕ್ಷಣವೇ ಅಗತ್ಯ ವೈದ್ಯಕೀಯ ಸಲಹೆಯನ್ನು ಪಡೆಯಬೇಕು.
- ಮೂಗು ಹಾಗೂ ಬಾಯಿ ಮುಚ್ಚುವಂತೆ ಮಾಸ್ಕ್ ಧರಿಸುವುದು, ಅಗತ್ಯ ಗಾಳಿ-ಬೆಳಕಿನ ವ್ಯವಸ್ಥೆಯಿಲ್ಲದ ಮತ್ತು ಹೆಚ್ಚು ಜನಸಂದಣಿಯಿರುವ ಪ್ರದೇಶಗಳಿಗೆ ಭೇಟಿ ನೀಡದಿರುವುದು ಸೂಕ್ತವಾಗಿದೆ.
- ಉತ್ತಮ ವೈಯಕ್ತಿಕ ಸ್ವಚ್ಛತೆ, ಆಗಾಗ್ಗೆ ಕೈಗಳನ್ನು ಸೋಪು ಹಾಗೂ ನೀರಿನಿಂದ ತೊಳೆದುಕೊಳ್ಳುವುದು, ಇತ್ಯಾದಿಗಳ ಪಾಲನೆಯು ಅಗತ್ಯವಾಗಿದೆ
- ಆರೋಗ್ಯ ಸಮಸ್ಯೆಗಳು ಕಂಡುಬಂದಲ್ಲಿ, ಮನೆಯಲ್ಲಿರುವುದು ಸೂಕ್ತ. ಇತರ ವ್ಯಕ್ತಿಗಳೊಂದಿಗೆ, ವಿಶೇಷವಾಗಿ ಹಿರಿಯ ನಾಗರಿಕರು / ದುರ್ಬಲರನ್ನು (vulnerable) ಅವಶ್ಯವಿದ್ದಲ್ಲಿ, ಮಾತ್ರವೇ ಭೇಟಿ ಮಾಡುವುದು.
- ಆರೋಗ್ಯ ಸಮಸ್ಯೆಗಳನ್ನು ಹೊಂದಿದವರು, ಜನಸಂದಣಿಯ ಪ್ರದೇಶಗಳಿಗೆ ಭೇಟಿ ನೀಡಬೇಕಾದ ಸಂದರ್ಭದಲ್ಲಿ ಮಾಸ್ಕ್ ಧರಿಸುವಂತೆ ಸಲಹೆ
- ಅಂತಾರಾಷ್ಟ್ರೀಯ ಪ್ರಯಾಣದ ಸಂದರ್ಭದಲ್ಲಿ ಎಚ್ಚರಿಕೆಯಿಂದಿದ್ದು, ವಿಮಾನ ನಿಲ್ದಾಣದಲ್ಲಿ ಹಾಗೂ ವಿಮಾನದ ಒಳಗೆ ಮಾಸ್ ಧರಿಸುವುದು ಹೆಚ್ಚಿನ ಗಾಳಿ-ಬೆಳಕು ಇಲ್ಲದ ಮತ್ತು ಜನದಟ್ಟಣೆ ಇರುವ ಸ್ಥಳಗಳಿಗೆ ತೆರಳದಿರುವುದೂ ಸೇರಿದಂತೆ ಇತರ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸುವುದು ಸೂಕ್ತವಾಗಿದೆ.