ನ್ಯೂಸ್ ನಾಟೌಟ್: ಉಪ್ಪಿನಂಗಡಿಯ ಮಠ ಎಂಬಲ್ಲಿ ಆಟೋ ರಿಕ್ಷಾಕ್ಕೆ ಟ್ಯಾಂಕರ್ ವೊಂದು ಡಿಕ್ಕಿ ಹೊಡೆದಿರುವ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ. ಘಟನೆಯಲ್ಲಿ ಮಗು ಸಹಿತ ನಾಲ್ವರು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಹಿರೇಬಂಡಾಡಿ ಗ್ರಾಮ ಪುತ್ತೂರು ನಿವಾಸಿ ಆಟೋ ರಿಕ್ಷಾ ಚಾಲಕ ಸುಧಾಕರ್ (54 ವರ್ಷ) ದೂರಿನಂತೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.
ಏನಿದು ಘಟನೆ..?
ಡಿಸೆಂಬರ್ 19ರಂದು ರಾತ್ರಿ ಮಠ ಎಂಬಲ್ಲಿ ತಮಿಳುನಾಡು ರಿಜಿಸ್ಟರ್ ಸಂಖ್ಯೆಯನ್ನು ಹೊಂದಿದ್ದ ಟ್ಯಾಂಕರ್ ಲಾರಿ ಚಾಲಕನ ಅಜಾಗರೂಕತೆಯಿಂದ ಆಟೋ ರಿಕ್ಷಾಕ್ಕೆ ಗುದ್ದಿದೆ. ಘಟನೆಯಲ್ಲಿ ಆಟೋ ರಿಕ್ಷಾ ಪಲ್ಟಿ ಆಗಿ ಜಖಂಗೊಂಡಿದೆ. ಒಳಗಿದ್ದ ರಿಕ್ಷಾ ಚಾಲಕ ಸುಧಾಕರ್ ಸಣ್ಣ ಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ಆಟೋ ರಿಕ್ಷಾದಲ್ಲಿ ಪ್ರಯಾಣಿಕರಾಗಿದ್ದ ಸೂರತ್ ರವರಿಗೆ ಮತ್ತು ಮಗುವಿಗೆ ಗುದ್ದಿದ ಗಾಯವಾಗಿ ಉಪ್ಪಿನಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಮತ್ತೋರ್ವ ಪ್ರಯಾಣಿಕರಾದ ಆಯಿಷಾ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ. ಪುತ್ತೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಅ.ಕ್ರ: 168/2023 ಕಲಂ: 279 337 ಐಪಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.