ನ್ಯೂಸ್ ನಾಟೌಟ್ : ಮರದ ಕೊಂಬೆ ಬಿದ್ದು ಮಹಿಳೆಯೊಬ್ಬರು ದುರಂತ ಅಂತ್ಯ ಕಂಡಿರುವ ಘಟನೆ ಮಡಿಕೇರಿಯ ಸುಂಟಿಕೊಪ್ಪ ಸಮೀಪದ ತೋಟವೊಂದರಲ್ಲಿ ಸಂಭವಿಸಿದೆ.ತೋಟದ ಲೈನ್ ಮನೆಯಲ್ಲಿ ವಾಸವಾಗಿರುವ ಕಾರ್ಮಿಕ ಬಪ್ಪಯ್ಯ ಅವರ ಪತ್ನಿ ಲಕ್ಷ್ಮೀ (48) ಎಂಬುವವರು ಪ್ರಾಣ ಕಳೆದುಕೊಂಡ ಮಹಿಳೆ ಎಂದು ಗುರುತಿಸಲಾಗಿದೆ.
ಲಕ್ಷ್ಮೀ ಎಂಬುವವರು ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಈ ದುರ್ಘಟನೆ ಸಂಭವಿಸಿದೆ.ಈ ವೇಳೆಗಾಗಲೇ ಮರದ ಕೊಂಬೆ ತಲೆಯ ಮೇಲೆ ಬಿದ್ದು, ಗಂಭೀರ ಗಾಯವಾಗಿದೆ. ಈ ವೇಳೆಗಾಗಲೇ ಗಂಭೀರವಾಗಿ ಗಾಯಗೊಂಡ ಅವರನ್ನು ಸುಂಟಿಕೊಪ್ಪ ಆಸ್ಪತ್ರೆಗೆ ದಾಖಲಿಸಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಯ ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೂ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಲಕ್ಷ್ಮೀ ಎಂಬವರು ಪತಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಸುಂಟಿಕೊಪ್ಪ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.