ನ್ಯೂಸ್ ನಾಟೌಟ್: ಅಯೋಧ್ಯೆಯಲ್ಲಿ ರಾಮಮಂದಿರ (Rama Mandira Ayodhya) ಉದ್ಘಾಟನಾ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ನಡೆಯುತ್ತಿದ್ದು, ಜನವರಿ 22ರಂದು ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಗಣ್ಯಾತೀಗಣ್ಯರಿಗೆ ಟ್ರಸ್ಟ್ ಆಹ್ವಾನಗಳನ್ನು ನೀಡುತ್ತಿದ್ದು, ಇದೀಗ ಕಾಂಗ್ರೆಸ್ ನಾಯಕರಿಗೂ ಆಮಂತ್ರಣ ಪತ್ರಿಕೆ ನೀಡಿದ್ದು, ಅದಕ್ಕೆ ಸೋನಿಯಗಾಂಧಿ ಸೇರಿ ಹಲವು ಕಾಂಗ್ರೆಸ್ ಮುಖಂಡರು ಧನ್ಯವಾದ ತಿಳಿಸಿದ್ದಾರೆ.
ಈ ಸಂಬಂಧ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೀರೋ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಪಕ್ಷದ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್, ಪಕ್ಷದ ನಿಲುವು ಏನೆಂದು ನಿಮಗೆ ತಿಳಿಯಲಿದೆ. ನಾವು ಭಾಗವಹಿಸುತ್ತೇವೆಯೋ ಇಲ್ಲವೋ ಎಂಬುದು ಜನವರಿ 22 ರಂದು ನಿಮಗೆ ಗೊತ್ತಾಗಲಿದೆ. ಅವರು ನಮಗೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಅವರ ಆಹ್ವಾನಕ್ಕೆ ನಾವೂ ಆಭಾರಿಯಾಗಿದ್ದೇವೆ, ಮುಂದೆ ಕಾದು ನೋಡೋಣ ಎಂದಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ಹಾಗೂ ಹೆಚ್.ಡಿ ದೇವೇಗೌಡರಿಗೂ (HD Devegowda) ಈಗಾಗಲೇ ಆಹ್ವಾನ ನೀಡಲಾಗಿದೆ.