ನ್ಯೂಸ್ ನಾಟೌಟ್: ಕಳೆದ 6-7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಕೊನೆಗೂ ಪೊಲೀಸ್ ಬಲೆಗೆ ಬಿದ್ದಿದ್ದಾನೆ. ಸುಳ್ಯದ ಐವತ್ತೋಕ್ಲು ಗ್ರಾಮದ ಶರೀಫ್ ಅಲಿಯಾಸ್ ಮೊಹಮ್ಮದ್ ಶರೀಫ್ ಎಂಬಾತ ಸುಮಾರು 6-7 ವರ್ಷಗಳಿಂದ ಮಾನ್ಯ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ.
ಈತನ ಬಂಧನಕ್ಕೆ ಪೊಲೀಸರು ಹಲವು ಸಲ ಪ್ರಯತ್ನ ನಡೆಸಿದರೂ ಸಾಧ್ಯವಾಗಿರಲಿಲ್ಲ. ಆದರೆ ಈತನ ಇರುವಿಕೆಯನ್ನು ಖಚಿತಪಡಿಸಿಕೊಂಡು ವೇಣೂರು ಪೊಲೀಸರು ದಿನಾಂಕ 21/12/2023 ರಂದು ಠಾಣಾ ಸಿಬ್ಬಂದಿಗಳಾದ ಪ್ರವೀಣ್ ಎಂ ಮತ್ತು ಸಚಿನ್ ವಿಟ್ಲದ ಸಾರಡ್ಕ ಎಂಬಲ್ಲಿ ದಸ್ತಗಿರಿ ಮಾಡಿ ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿರುತ್ತಾರೆ.
ಈತ ವೇಣೂರು ಪೊಲೀಸ್ ಠಾಣಾ ಅ.ಕ್ರ 71/2008 ಕಲಂ 457,380 ಪ್ರಕರಣದ ಆರೋಪಿಯಾಗಿದ್ದ ಎಂದು ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.