ನ್ಯೂಸ್ ನಾಟೌಟ್: ಜೆಸಿಬಿಯಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ನಾಲ್ವರು ಮಣ್ಣಿನಡಿಗೆ ಸಿಲುಕಿದ್ದು,ಅದರಲ್ಲಿ ಓರ್ವ ದುರಂತ ಅಂತ್ಯ ಕಂಡಿರುವ ಘಟನೆ ವರದಿಯಾಗಿದೆ. ಚಿಕ್ಕಮಗಳೂರಿನ ನೆಮ್ಮಾರ್ ಸಮೀಪದ ತನಿಕೋಡು ಚೆಕ್ಪೋಸ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಹಿನ್ನೆಲೆಯಲ್ಲಿ ಈ ಕೆಲಸ ಕೈಗೆತ್ತಿಕೊಂಡಿತ್ತು. ಈ ವೇಳೆ ಈ ದುರ್ಘಟನೆ ಸಂಭವಿಸಿದೆ.
ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಮಾಡುವ ಸಂದರ್ಭ ಮಧ್ಯಾಹ್ನ ಸುಮಾರು 2 ಗಂಟೆಗೆ ಜೆಸಿಬಿ ಯಂತ್ರ ಬಳಸಿ ಮಣ್ಣು ತೆಗೆಯುವಾಗ ಕೆಳಗಡೆ ಕೆಲಸ ಮಾಡುತ್ತಿದ್ದ ನಾಲ್ವರು ಕಾರ್ಮಿಕರ ಮೇಲೆ ಏಕಾಏಕಿ ಮಣ್ಣು ಕುಸಿದಿದೆ. ತಕ್ಷಣ ಇಬ್ಬರು ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ.ಇದಾದದ ಬಳಿಕ ಸ್ವಲ್ಪ ಸಮಯದಲ್ಲಿ ಮತ್ತೊಬ್ಬನನ್ನು ರಕ್ಷಣೆ ಮಾಡಲಾಗಿದೆ. ಆದರೆ ಇನ್ನೊಬ್ಬ ಕಾರ್ಮಿಕನ ರಕ್ಷಣೆಗೆ ಒಂದು ಗಂಟೆ ಕಾಲ ಮೂರು ಜೆಸಿಬಿ ಮೂಲಕ ಕಾರ್ಯಾಚರಣೆ ಮಾಡಲಾಯಿತು. ಕಾರ್ಮಿಕನನ್ನು ಹೊರತೆಗೆದಾಗ ಆತ ಕೊನೆಯುಸಿರೆಳೆದಿದ್ದನೆಂದು ತಿಳಿದು ಬಂದಿದೆ.
ರಾಷ್ಟ್ರೀಯ ಹೆದ್ದಾರಿಯ ಕಾರ್ಯಾಚರಣೆ ಹಲವು ತಿಂಗಳಿನಿಂದ ನಡೆಯುತ್ತಿದ್ದು,ಈ ದುರ್ಘಟನೆ ಸಂಭವಿಸಿದೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಅಂಬುಲೆನ್ಸ್ ಹಾಗೂ ಶೃಂಗೇರಿ ಪೋಲಿಸರು ಭೇಟಿ ನೀಡಿ ಕಾರ್ಮಿಕರ ರಕ್ಷಣಾ ಕಾರ್ಯ ನಡೆಸಿದ್ದು ಉಳಿದ ಮೂರು ಕಾರ್ಮಿಕರನ್ನು ಸ್ಥಳೀಯ ಸರ್ಕಾರಿ ಅಸ್ಪತ್ರೆಗೆ ಸೇರಿಸಲಾಗಿದೆ.