ನ್ಯೂಸ್ ನಾಟೌಟ್ : ಬಾಲಿವುಡ್ (Bollywood) ಹೆಸರಾಂತ ನಟ ಸಲ್ಮಾನ್ ಖಾನ್ ಕಿರಿಯ ಸಹೋದರ, ಹಾಗೂ ನಟಿ ಮಲೈಕಾ ಅರೋರಾ ಅವರ ಮಾಜಿ ಪತಿ ಅರ್ಬಾಜ್ ಖಾನ್ (Arbaaz Khan) ನಿನ್ನೆ (ಡಿ.24) ಹೊಸ ಜೀವನಕ್ಕೆ ಕಾಲಿಟ್ಟರು.ಮೇಕಪ್ ಆರ್ಟಿಸ್ಟ್ ಶುರಾ ಖಾನ್ (Shura Khan) ಜೊತೆ ಅರ್ಬಾಜ್ ಮದುವೆ (Marriage) ಸರಳವಾಗಿ ನಡೆದಿದ್ದು, ಮುಂಬೈನಲ್ಲಿರುವ ಕುಟುಂಬದ ಸದಸ್ಯರು ಮತ್ತು ಆತ್ಮೀಯರಿಗೆ ಮಾತ್ರ ಮದುವೆಯಲ್ಲಿ ಭಾಗಿಯಾದರು.
ಸಹೋದರಿ ಅರ್ಪಿತಾ ಖಾನ್ ಮನೆಯಲ್ಲಿ ಭಾನುವಾರ ನಡೆದ ನಿಕಾಹ್ ಗಾಗಿ ವಧು ಶುರಾ ಕಾನ್ ಲೈಟ್ ವೈಟ್ ಪೀಚ್ ಲೆಹೆಂಗಾ ಧರಿಸಿದ್ದರು. ಅರ್ಬಾಜ್ ಕೂಡ ಗ್ರ್ಯಾಂಡ್ ಆಗಿರುವ ಕಾಸ್ಟ್ಯೂಮ್ ಹಾಕಿಕೊಂಡಿದ್ದರು. ತಮ್ಮ ಇನ್ಸ್ಟಾ ಪೇಜ್ ನಲ್ಲಿ ಮದುವೆ ಕುರಿತು ಅರ್ಬಾಜ್ ಬರೆದುಕೊಂಡು ಫೋಟೋ ಹಂಚಿಕೊಂಡಿದ್ದಾರೆ.
ನಟಿ ಮಲೈಕಾ ಅರೋರಾ ಜೊತೆ ಅರ್ಬಾಜ್ 1998ರಲ್ಲಿ ಮದುವೆ ಆಗಿದ್ದರು.ಇವರಿಬ್ಬರ ಸುಮಧುರ ದಾಂಪತ್ಯ ಜೀವನದ ಫಲವೆಂಬಂತೆ ಓರ್ವ ಮಗನೂ ಹುಟ್ಟಿದ್ದ. ಆದರೆ ವೈಯಕ್ತಿಕ ಕಾರಣಗಳಿಂದಾಗಿ ಇಬ್ಬರೂ ಡಿವೋರ್ಸ್ ಪಡೆದುಕೊಂಡು ದೂರವಾದರು.ಮಲೈಕಾ ಮತ್ತು ಅರ್ಬಾಜ್ 19 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದರು. ನಂತರ ಅರ್ಬಾಜ್ ರೂಪದರ್ಶಿ ಜಾರ್ಜಿಯಾ ಜೊತೆ ಡೇಟ್ ಮಾಡುತ್ತಿದ್ದರು. ಆ ಸಂಬಂಧವೂ ಮುರಿದು ಬಿದ್ದಿತ್ತು.ಒಂಟಿಯಾಗಿ ಜೀವನ ನಡೆಸುತ್ತಿದ್ದ ಅರ್ಬಾಜ್ ಖಾನ್ ಇದೀಗ ಮೇಕಪ್ ಕಲಾವಿದೆ ಜೊತೆ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಅರ್ಬಾಜ್ ಖಾನ್ ಅವರಿಗೂ ಮತ್ತು ಶುರಾ ಖಾನ್ ಅವರ ವಯಸ್ಸಿನ ಅಂತರ ಬರೋಬ್ಬರಿ 22 ವರ್ಷ ಎಂದು ಹೇಳಲಾಗುತ್ತಿದೆ.