ನ್ಯೂಸ್ ನಾಟೌಟ್ : ಯುವತಿಯೊಬ್ಬಳು ಹೇಮಾವತಿ ನದಿ ಹಿನ್ನೀರಿನಲ್ಲಿ (Hemavati River) ಮುಳುಗಿ ಕೊನೆಯುಸಿರೆಳೆದ ಘಟನೆ ಹಾಸನದ (Hassan) ಗೊರೂರಿನಲ್ಲಿ (Gorur) ನಡೆದಿದೆ. ಯುವತಿಯನ್ನು ಗೊರೂರು ಅರಳಿಕಟ್ಟೆ ಗ್ರಾಮದ ಗಿರೀಶ್ ಎಂಬವರ ಪುತ್ರಿ ನಿತ್ಯ (19) ಎಂದು ಗುರುತಿಸಲಾಗಿದೆ.
ಈಕೆ ಹನುಮ ಜಯಂತಿ ಪೂಜೆಗಾಗಿ ಸಂಬಂಧಿಕರೊಂದಿಗೆ ಗ್ರಾಮದ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ತೆರಳಿದ್ದಳು ಎನ್ನಲಾಗಿದೆ. ಈ ವೇಳೆ ಪೂಜೆ ಸಲ್ಲಿಸಿ ಹೇಮಾವತಿ ಹಿನ್ನೀರಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾಳೆ.ಯುವತಿಯ ದೇಹಕ್ಕಾಗಿ ಅಗ್ನಿಶಾಮಕದಳದಿಂದ ಶೋಧಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೊರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.