ನ್ಯೂಸ್ ನಾಟೌಟ್ : ಜಾರ್ಖಂಡ್ನ ವಿದ್ಯಾರ್ಥಿಯೊಬ್ಬನನ್ನು ಬುಧವಾರ(ಡಿ.27) ಉತ್ತರ ಪ್ರದೇಶದಲ್ಲಿ ಬಂಧಿಸಲಾಗಿದ್ದು, ಆತ ದೇಶದ್ರೋಹಿ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದ ಎನ್ನಲಾಗಿದೆ.
ಜಾರ್ಖಂಡ್ ಮೂಲದ ವಿದ್ಯಾರ್ಥಿ, ‘ಶೀಘ್ರದಲ್ಲೇ ಪುಲ್ವಾಮಾ ರೀತಿಯ ದಾಳಿ ನಡೆಯಲಿದೆ’ ಎಂದು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.
ವಿದ್ಯಾರ್ಥಿ ವಿರುದ್ಧ ಎಫ್ಐಆರ್ ದಾಖಲಾಗಿದ್ದು, ಆರೋಪಿ ವಿದ್ಯಾರ್ಥಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಉತ್ತರ ಪ್ರದೇಶದ ಸಹರಾನ್ಪುರ ಪೊಲೀಸರು ವಿದ್ಯಾರ್ಥಿಯನ್ನು ಬಂಧಿಸಿದ್ದಾರೆ ಎಂದು ಮಾಹಿತಿ ದೊರೆತಿದೆ.
ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭದ್ರತಾ ಪಡೆಗಳು ಮೂವರನ್ನು ಬಂಧಿಸಿ ಆರೋಪಿಗಳಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. ಅಲ್ಲದೆ, ಶಂಕಿತರನ್ನು ಸೇನೆ ಮತ್ತು ಪೊಲೀಸರು ಜಂಟಿಯಾಗಿ ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
2019 ರ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ 40 ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ (ಸಿಆರ್ಪಿಎಫ್) ಸಿಬ್ಬಂದಿ ಹುತಾತ್ಮರಾಗಿದ್ದರು. ಫೆಬ್ರವರಿ 14 ರಂದು ಜಮ್ಮು- ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಾಹನಗಳ ಬೆಂಗಾವಲು ವಾಹನದ ಮೇಲೆ ಲೆಥಾಪೋರಾದಲ್ಲಿ ಬಾಂಬರ್ ದಾಳಿ ನಡೆಸಿದಾಗ ಈ ದುರ್ಘಟನೆ ಸಂಭವಿಸಿತ್ತು.