ನ್ಯೂಸ್ ನಾಟೌಟ್: ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊಡಗು, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಮಡಿಕೇರಿ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಸಂಪಾಜೆ ಸಂಯುಕ್ತಾಶ್ರಯದಲ್ಲಿ ಆಯುಷ್ಮಾನ್ ಭವ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಜನವರಿ 2 ಮಂಗಳವಾರದಂದು ಸಂಪಾಜೆಯಲ್ಲಿ ಆಯೋಜಿಸಲಾಗಿದೆ. ಕೊಡಗು ಸಂಪಾಜೆ, ಬಾಲಂಬಿ, ಪೆರಾಜೆ, ಮದೆನಾಡು ಗ್ರಾಮ ಪಂಚಾಯಿತಿ ಈ ಕಾರ್ಯಕ್ರಮದಲ್ಲಿ ಕೈ ಜೋಡಿಸಿವೆ.
ಈ ಕಾರ್ಯಕ್ರಮದಲ್ಲಿ ಸಾಮಾನ್ಯ ವೈದ್ಯ ಶಾಸ್ತ್ರ, ಶಸ್ತ್ರಚಿಕಿತ್ಸಾ ವಿಭಾಗ, ಪ್ರಸೂತಿ ಮತ್ತು ಸ್ತ್ರೀ ರೋಗ ವಿಭಾಗ, ಮಕ್ಕಳ ವಿಭಾಗ, ಕಣ್ಣಿನ ವಿಭಾಗ, ಕಿವಿ, ಮೂಗು ಮತ್ತು ಗಂಟಲು ವಿಭಾಗ, ಕೀಲು ಮತ್ತು ಮೂಳೆ, ಚರ್ಮ ರೋಗ, ಮಾನಸಿಕ ಆರೋಗ್ಯ ವಿಭಾಗ, ಶ್ವಾಸಕೋಶ ವಿಭಾಗದ ವೈದ್ಯರು ಆಗಮಿಸಲಿದ್ದಾರೆ.
ಈ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿರಿ: 9008981023, 9008054201, 6363620731.