ನ್ಯೂಸ್ ನಾಟೌಟ್: ಶಾಲಾ ಬಸ್ ಡ್ರೈವರ್ (School Bus Driver) ಪ್ರೇಮದಾಟಕ್ಕೆ 8ನೇ ತರಗತಿ ವಿದ್ಯಾರ್ಥಿನಿ ಬಲಿಯಾದ ದುರ್ಘಟನೆ ಚಿಕ್ಕಮಗಳೂರಿನ ಅಜ್ಜಂಪುರ ಸಮೀಪ ನಡೆದಿದೆ.
ಬಂಕನಕಟ್ಟೆ ಬಳಿಇರೋ ರೈಲ್ವೇ ಹಳಿಗೆ ತಲೆಕೊಟ್ಟು 38 ವರ್ಷದ ಸಂತೋಷ್ ಜತೆ 14 ವರ್ಷದ ವಿದ್ಯಾರ್ಥಿನಿ ಸೂಸೈಡ್ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ.
ಅಪ್ರಾಪ್ತ ಬಾಲಕಿ ಗಿರಿಯಾಪುರ ಗ್ರಾಮದ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಭಾನುವಾರ(ಜ.೧) ಸ್ನೇಹಿತರ ಜೊತೆ ನ್ಯೂ ಇಯರ್ ಪಾರ್ಟಿಗೆ ಹೋಗ್ತೀನಿ ಎಂದು ಪೋಷಕರಿಗೆ ಹೇಳಿ ಹೋಗಿದ್ದ ಬಾಲಕಿ, ಡ್ರೈವರ್ ಸಂತೋಷ್ ಜೊತೆ ತೆರಳಿದ್ದಳು. ಭಾನುವಾರ ಮಧ್ಯರಾತ್ರಿಯೇ ರೈಲಿಗೆ ಸಿಕ್ಕಿ ಇಬ್ಬರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ನಿಖರ ಕಾರಣ ತಿಳಿದುಬಂದಿಲ್ಲ.
ಕಳೆದ ಮೂರು ವರ್ಷಗಳಿಂದ ಸಂತೋಷ್ ಶಾಲೆಯ ಬಸ್ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದನು. ಸಂತೋಷ್ ಮಕ್ಕಳಿಗೆ ಕಿರುಕುಳ ನೀಡುತ್ತಿರುವ ಬಗ್ಗೆ ಪೋಷಕರು ಶಾಲೆಯ ಪ್ರಾಂಶುಪಾಲರ ಗಮನಕ್ಕೆ ತಂದಿದ್ದರು.
ಮರಣೋತ್ತರ ಪರೀಕ್ಷೆಗಾಗಿ ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಯ ಶವಗಾರದಲ್ಲಿ ಮೃತದೇಹಗಳನ್ನ ಇಡಲಾಗಿದೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.