ನ್ಯೂಸ್ ನಾಟೌಟ್ :ಆಯೋಧ್ಯೆಯಲ್ಲಿ ಪ್ರಭು ಶ್ರೀ ರಾಮ ಚಂದ್ರ ಮಂದಿರ ಉದ್ಘಾಟನೆಗೆ ದಿನಗಣನೆ ಆರಂಭಗೊಂಡಿದೆ.ಜನವರಿ ೨೨ ಆ ದಿನಕ್ಕಾಗಿ ಶ್ರೀ ರಾಮನ ಭಕ್ತರು ಕಾಯುತ್ತಿದ್ದಾರೆ.ಇದೀಗ ಮೊನ್ನೆಯಷ್ಟೇ ಅಯೋಧ್ಯೆ ರಾಮಮಂದಿರವನ್ನು (Ayodhya Ram Mandir) ಸ್ಫೋಟಿಸುವುದಾಗಿ ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಯಾರೋ ಕಿಡಿಗೇಡಿಗಳು ಪೋಸ್ಟ್ ಮಾಡಿದ್ದರು. ಇದೀಗ ಇಬ್ಬರು ಕಿಡಿಗೇಡಿಗಳನ್ನು ಉತ್ತರ ಪ್ರದೇಶದ (Uttar Pradesh) ಪೊಲೀಸರು (Police) ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಬಂಧಿತ ಆರೋಪಿಗಳನ್ನು ತಹರ್ ಸಿಂಗ್ ಹಾಗೂ ಓಂಪ್ರಕಾಶ್ ಮಿಶ್ರಾ ಎಂದು ಗುರುತಿಸಲಾಗಿದೆ. ಲಕ್ನೋದ ಗೋಮತಿ ನಗರದ ವಿಭೂತಿ ಖಂಡ್ನಿಂದ ಆರೋಪಿಗಳನ್ನು ವಿಶೇಷ ಪೊಲೀಸ್ ಪಡೆ ಬಂಧಿಸಿದೆ. ಆರೋಪಿಗಳು ಗೊಂಡಾ ನಿವಾಸಿಗಳಾಗಿದ್ದು, ಅರೆವೈದ್ಯಕೀಯ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಆರೋಪಿಗಳು ಎಕ್ಸ್ನಲ್ಲಿ, ಆದಿತ್ಯನಾಥ್ (Yogi Adityanath), ಎಸ್ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್ ಮತ್ತು ಅಯೋಧ್ಯೆಯ ರಾಮ ಮಂದಿರಕ್ಕೆ ಬೆದರಿಕೆ ಹಾಕಿದ್ದರು. ಬೆದರಿಕೆ ಬಂದ ಎಕ್ಸ್ ಖಾತೆ ಹಾಗೂ ಇಮೇಲ್ ಐಡಿಗಳ ಬಗ್ಗೆ ಮಾಹಿತಿ ಕಲೆ ಹಾಕಿದ ಬಳಿಕ ತಹರ್ ಸಿಂಗ್ ಇಮೇಲ್ ಖಾತೆಗಳನ್ನು ರಚಿಸಿದ್ದಾನೆ ಮತ್ತು ಓಂಪ್ರಕಾಶ್ ಮಿಶ್ರಾ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾನೆ ಎಂಬುದು ತಿಳಿದು ಬಂದಿದೆ.ಎಸ್ಟಿಎಫ್ ಅಧಿಕಾರಿಗಳು ಅರೋಪಿಗಳ ವಿರುದ್ಧ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.