ನ್ಯೂಸ್ ನಾಟೌಟ್: ನಾನು ಕರಸೇವಕ ನನ್ನನ್ನೂ ಬಂಧಿಸಿ ಎಂಬ ಭಿತ್ತಿಪತ್ರ ಹಿಡಿದು ಮಾಜಿ ಸಚಿವ ಕಾರ್ಕಳದ ಹಾಲಿ ಶಾಸಕ ಸುನೀಲ್ ಕುಮಾರ್ ಏಕಾಂಗಿ ಪ್ರತಿಭಟನೆ ನಡೆಸಿರುವ ಬೆನ್ನಲ್ಲೇ ಇದೀಗ ಮಾಜಿ ಸಚಿವ ಸಿ.ಟಿ.ರವಿ ‘ನಾನೂ ಕರಸೇವಕ, ನನ್ನನ್ನು ಬಂಧಿಸಿ’ ಎಂದು ಬರೆದಿರುವ ಭಿತ್ತಿಪತ್ರ ಹಿಡಿದು ಗುರುವಾರ ಚಿಕ್ಕಮಗಳೂರು ನಗರ ಠಾಣೆ ಎದುರು ಏಕಾಂಗಿ ಧರಣಿ ನಡೆಸಿದ ಘಟನೆ ವರದಿಯಾಗಿದೆ.
ಮೂರು ದಶಕಗಳ ಹಿಂದೆ ಬಾಬರಿ ಧ್ವಂಸ ಸಂದರ್ಭ ಹುಬ್ಬಳ್ಳಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿ ಶ್ರೀಕಾಂತ್ ಪೂಜಾರಿ ಎಂಬವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸಿ ಮಾಜಿ ಸಚಿವ ಸಿ.ಟಿ.ರವಿ ಏಕಾಂಗಿ ಧರಣಿ ನಡೆಸಿದರು.ಈ ವೇಳೆ ಕೆಲವು ಕಾರ್ಯಕರ್ತರೊಂದಿಗೆ ಆಗಮಿಸಿ ಪೊಲೀಸ್ ಠಾಣೆಯ ಮುಂಭಾಗ ‘ನಾನು ಕ್ರಿ.ಶ.1992 ಡಿ.6ರ ಅಯೋಧ್ಯೆ ಶ್ರೀರಾಮ ಮಂದಿರದ ಕರಸೇವಕ, ನನ್ನನ್ನೂ ಬಂಧಿಸಿ’ ಎಂಬ ಭಿತ್ತಿಪತ್ರವನ್ನು ಹಿಡಿದು ನಗರ ಪೊಲೀಸ್ ಠಾಣೆ ಮುಂಭಾಗ ಏಕಾಂಗಿಯಾಗಿ ಪ್ರತಿಭಟನೆ ನಡೆಸಿದರು. ಠಾಣೆಯ ಗೇಟ್ ಆವರಣದಲ್ಲಿದ್ದ ಕಾರ್ಯಕರ್ತರು ಸಿ.ಟಿ.ರವಿ ಪ್ರತಿಭಟನೆಗೆ ಸಾಥ್ ನೀಡಿದರು.
ಈ ವೇಳೆ ಕಾರ್ಯಕರ್ತರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪ್ರತಿಭಟನೆ ವೇಳೆ ಹೆಚ್ಚುವರಿ ಎಸ್ಪಿ ಕೃಷ್ಣ ಮೂರ್ತಿಯವರು ಸಿ.ಟಿ.ರವಿಯನ್ನು ಪೋಲಿಸ್ ಠಾಣೆ ಒಳಗೆ ಕರೆದುಕೊಂಡು ಹೋದರು. ಈ ವೇಳೆ ಬಿಜೆಪಿ ಕಾರ್ಯಕರ್ತರು ನಾವೂ ಕರ ಸೇವಕರು, ನಮ್ಮನ್ನು ಬಂಧಿಸಿ ಎಂದು ಠಾಣೆಗೆ ಮುತ್ತಿಗೆ ಹಾಕಲು ಮುಂದಾದರು. ಈ ಸಂದರ್ಭ ಬಿಜೆಪಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ, ತಳ್ಳಾಟ, ನೂಕಾಟ ನಡೆಯಿತು. ನಂತರ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಠಾಣೆಯ ಆವರಣದಿಂದ ಹೊರಗೆ ಕಳಿಸಿದರು.