ನ್ಯೂಸ್ ನಾಟೌಟ್ : ರಾಮಮಂದಿರದ ಪ್ರತಿಷ್ಠಾಪನೆಗೆ ದಿನಗಣನೆ ಆರಂಭವಾಗಿದ್ದು ಹಲವರು ಈ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಿದ್ದಾರೆ. ಅಯೋಧ್ಯೆಯಲ್ಲಿ ಜ.22ರಂದು ರಾಮ ಮಂದಿರ ಉದ್ಘಾಟನೆ ನಿಮಿತ್ತ ಜನರು ದೇಶಾದ್ಯಂತ ಪ್ರಯಾಣಿಸುತ್ತಾರೆ. ಹೀಗಾಗಿ ಈ ತಿಂಗಳ 20ರಿಂದ 25ರ ವರೆಗೆ ದೇಶದಲ್ಲಿ ಇರುವ ಮುಸ್ಲಿಮರು ಮನೆಯಿಂದ ಹೊರಗೆ ಬರುವುದು ಬೇಡ ಎಂದು ಸಂಸದ ಬದ್ರುದ್ದೀನ್ ಅಜ್ಮಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಅಸ್ಸಾಂನ ಬಾರ್ಪೆಟಾದಲ್ಲಿ ಮಾತನಾಡಿದ ಅವರು, ಬಾಬರಿ ಮಸೀದಿ ಧ್ವಂಸದ ಸಂದರ್ಭದ ಬಳಿಕ ಉಂಟಾಗಿದ್ದ ಪರಿಸ್ಥಿತಿಯೇ ಮತ್ತೆ ಮರುಕಳಿಸಬಹುದು. ಹಿಂಸಾತ್ಮಕ ಘಟನೆಗಳು ಸಂಭವಿಸಬಹುದು.
ಇದರಿಂದಾಗಿ ಸಮುದಾಯದವರನ್ನು ರಕ್ಷಿಸುವ ಕೆಲಸ ಆಗಬೇಕಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಜ. 20ರಿಂದ 25ರ ಅವಧಿಯಲ್ಲಿ ಜನರು ಬಸ್ನಲ್ಲಿ, ವಿಮಾನದಲ್ಲಿ ರೈಲಿನಲ್ಲಿ ಅಯೋಧ್ಯೆಗೆ ತೆರಳುತ್ತಾರೆ. ಈ ಸಂದರ್ಭದಲ್ಲಿ ಮುಸ್ಲಿಮರು ಯಾರೂ ಮನೆಯಿಂದ ಹೊರಗೆ ಬರುವುದು ಬೇಡ ಎಂದು ಹೇಳಿಕೆ ನೀಡಿದ್ದಾರೆ.
ಬಿಜೆಪಿ ವಿರುದ್ಧ ವೂ ಆಕ್ರೋಶ ವ್ಯಕ್ತಪಡಿಸಿದ ಸಂಸದ, “ಆ ಪಕ್ಷ ನಮ್ಮ ಸಮುದಾಯದ ವೈರಿ’ ಎಂದು ದೂರಿದ್ದಾರೆ. ಬಿಜೆಪಿ ಎಲ್ಲ ಧರ್ಮಗಳ ಮೇಲೆ ಗೌರವ ಹೊಂದಿದೆ. ಸಬ್ ಕಾ ಸಾಥ್ ಸಬ್ಕಾ ವಿಶ್ವಾಸ್ ಎಂಬ ನಿಲುವಿನ ಮೇಲೆ ಪಕ್ಷ ಕಾರ್ಯ ನಿರ್ವಹಿಸುತ್ತಿದೆ ಎಮದು ಕೇಂದ್ರ ಸಚಿವ ಗಿರಿರಾಜ್ ಸಿಂಗ್ ತಿರುಗೇಟು ನೀಡಿದ್ದಾರೆ.