ನ್ಯೂಸ್ ನಾಟೌಟ್: ಏಳು ವರ್ಷಗಳ ಹಿಂದೆ ಕಾರ್ಯಾಚರಣೆಯ ವೇಳೆ 29 ರಕ್ಷಣಾ ಸಿಬ್ಬಂದಿಯೊಂದಿಗೆ ನಾಪತ್ತೆಯಾಗಿದ್ದ ಭಾರತೀಯ ವಾಯುಪಡೆಯ ಎಎನ್-32 ವಿಮಾನದ ಅವಶೇಷಗಳು ಚೆನ್ನೈ ಕರಾವಳಿಯಲ್ಲಿ ಸಮುದ್ರದಲ್ಲಿ 3.1 ಕಿಮೀ ಆಳದಲ್ಲಿ ಪತ್ತೆಯಾಗಿವೆ ಎಂದು ವರದಿ ತಿಳಿಸಿದೆ.
ಚೆನ್ನೈ ಮೂಲದ ರಾಷ್ಟ್ರೀಯ ಸಾಗರ ತಂತ್ರಜ್ಞಾನ ಸಂಸ್ಥೆ(ಎನ್ಐಒಟಿ) ವಿಜ್ಞಾನಿಗಳು ಕಳೆದ ತಿಂಗಳು ಬಹು-ಬೀಮ್ ಸೋನಾರ್(ಸೌಂಡ್ ನ್ಯಾವಿಗೇಷನ್ ಮತ್ತು ರೇಂಜಿಂಗ್) ಸೇರಿದಂತೆ ಸಮುದ್ರದ ಆಳದಲ್ಲಿ ಕಾರ್ಯಾಚರಣೆ ನಡೆಸಬಲ್ಲ ಎಯುವಿ ವಾಹನವನ್ನು ವಿಮಾನ ಅವಘಡ ಸಂಭವಿಸಿದ್ದ ಸ್ಥಳದಲ್ಲಿ ನಿಯೋಜಿಸಿದ್ದರು. ಎಯುವಿ ವಾಹನ 3.1 ಕಿ.ಮೀ. ಆಳದಲ್ಲಿ ವಿಮಾನದ ಅವಶೇಷಗಳನ್ನು ಪತ್ತೆ ಮಾಡಿದೆ ಎನ್ನಲಾಗಿದೆ.
An-32 ವಿಮಾನವು ಜುಲೈ 22, 2016 ರಂದು ಚೆನ್ನೈನ ತಾಂಬರಂ ಏರ್ ಫೋರ್ಸ್ ಸ್ಟೇಷನ್ನಿಂದ ಟೇಕ್ ಆಫ್ ಆಗಿತ್ತು. ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ತೆರಳುತ್ತಿದ್ದಾಗ ಬಂಗಾಳ ಕೊಲ್ಲಿಯಲ್ಲಿ ನಾಪತ್ತೆಯಾಗಿತ್ತು.
ಸಮುದ್ರದಲ್ಲಿ 3,400 ಮೀಟರ್ ಆಳದಲ್ಲಿ ಬಲವಾದ ಸೋನಾರ್ ಪ್ರತಿಬಿಂಬಗಳನ್ನು ತೆಗೆದುಕೊಂಡಿದೆ ಮತ್ತು ವಿಮಾನದ ಅವಶೇಷಗಳ ಚಿತ್ರಗಳನ್ನು ಕ್ಲಿಕ್ ಮಾಡಿದೆ. ತಕ್ಷಣ ಆ ಚಿತ್ರಗಳನ್ನು ವಾಯುಪಡೆ ಅಧಿಕಾರಿಗಳಿಗೆ ಕಳುಹಿಸಲಾಗಿದೆ. ಅವರು ಅಧ್ಯಯನ ನಡೆಸಿ ಈ ಅವಶೇಷಗಳು ಏಳು ವರ್ಷಗಳ ಹಿಂದೆ ನಾಪತ್ತೆಯಾಗಿದ್ದ An-32 ವಿಮಾನಕ್ಕೆ ಸೇರಿದ್ದು ಎಂದು ದೃಢಪಡಿಸಿದ್ದಾರೆ.
Follow us for more updates:
FB PAGE : https://www.facebook.com/NewsNotOut2023
Insta : https://www.instagram.com/newsnotout/
Tweet : https://twitter.com/News_Not_Out
YouTube : https://www.youtube.com/@newsnotout8209
Koo app: https://www.kooapp.com/profile/NewsNotOut
Website : https://newsnotout.com/