ನ್ಯೂಸ್ ನಾಟೌಟ್ : ಇತ್ತೀಚಿನ ದಿನಗಳಲ್ಲಿ ರಸ್ತೆಯಲ್ಲಿ ಹೆಣ್ಣು ಮಕ್ಕಳು ಮರ್ಯಾದೆಯಿಂದ ಓಡಾಡುವುದಕ್ಕೂ ಆಗದ ಪರಿಸ್ಥಿತಿ ನಿರ್ಮಾಣವಾಗಿದೆ. ಅದರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ಹೆಣ್ಣು ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ಪ್ರಕರಣಗಳು ಹೆಚ್ಚಾಗುತ್ತಿದೆ.
ಇದೀಗ ಹೋಟೆಲ್ ಗೆ ಬಂದ ಹುಡುಗಿಯೊಬ್ಬಳಿಗೆ ಯುವಕರ ಗುಂಪೊಂದು ಹಾಡಹಗಲೇ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಬೆಂಗಳೂರಿನ ವಿಜಯ ನಗರದ ಕೃಷ್ಣ ಸಾಗರ್ ಹೋಟೆಲ್ ಬಳಿ ನಡೆದಿದೆ. ಘಟನೆ ಕುರಿತಂತೆ ಸಿಸಿಟಿವಿ ವಿಡಿಯೋ ವೈರಲ್ ಆಗಿದ್ದು ಬೇಕು ಬೇಕಂತಲೇ ಟಚ್ ಮಾಡಿ ಯುವಕರು ಪುಂಡಾಟ ಮೆರೆದಿದ್ದಾರೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು ಆರೋಪಿಗಳಿಗಾಗಿ ಪೊಲೀಸರು ಶೋಧ ನಡೆಸಿದ್ದಾರೆ.