ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ನೇತೃತ್ವದಲ್ಲಿ ಗುರುವಾರ ‘ನಾರಿ ಶಕ್ತಿ’ ಮಹಿಳಾ ಸಬಲೀಕರಣ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಅಧ್ಯಕ್ಷ ಡಾ. ಕೆ.ವಿ ಚಿದಾನಂದ ಅವರು, ‘ ಇಂದಿನ ಸಮಾಜದಲ್ಲಿ ಮಹಿಳೆಯರ ಮೇಲೆ ಹಲವು ದಬ್ಬಾಳಿಕೆಯಂತಹ ಪ್ರಕರಣಗಳು ನಡೆಯುತ್ತಿರುತ್ತದೆ. ಮಹಿಳೆಯರು ಇದನ್ನೆಲ್ಲ ಮೆಟ್ಟಿ ನಿಂತು ಸಮಾಜದಲ್ಲಿ ತಮ್ಮ ಬೆಳವಣಿಗೆಯನ್ನು ಕಂಡುಕೊಳ್ಳಬೇಕಿದೆ. ಸ್ತ್ರಿ ಶಕ್ತಿಯಾಗಿ ರೂಪುಗೊಳ್ಳಬೇಕಿದೆ ಎಂದು ತಿಳಿಸಿದರು.
ಇದೇ ವೇಳೆ ಮಾತನಾಡಿದ ನೆಹರೂ ಮೆಮೊರಿಯಲ್ ಪಿಯು ಕಾಲೇಜು ಪ್ರಾಂಶುಪಾಲೆ ಮಿಥಾಲಿ ಪಿ. ರೈ, ಮಹಿಳೆಯರು ಇಂದು ಎಲ್ಲ ಕ್ಷೇತ್ರದಲ್ಲೂ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ರಾಜಕೀಯ, ಶೈಕ್ಷಣಿಕ, ಕಲಾರಂಗದಲ್ಲಿ ಛಾಪು ಮೂಡಿಸಿದ್ದಾರೆ. ಹೆಣ್ಣು ಅಬಲೆಯಲ್ಲ ಸಬಲೆ ಅನ್ನುವುದನ್ನು ನಿರೂಪಿಸಿ ತೋರಿಸಿದ್ದಾರೆ ಎಂದು ತಿಳಿಸಿದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ (ರಿ) ಸುಳ್ಯ ಉಪಾಧ್ಯಕ್ಷೆ ಶೋಭಾ ಚಿದಾನಂದ, ಕೆವಿಜಿ ಮೆಡಿಕಲ್ ಕಾಲೇಜು & ಹಾಸ್ಪಿಟಲ್ ಸುಳ್ಯ ಡೀನ್ ಡಾ ನೀಲಂಬಿಕೆ ನಟರಾಜನ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು. ಇದೇ ವೇಳೆ ಡಾ. ಪೂನಂ ಎಮ್ ಅವರು ಮಹಿಳೆಯರಿಗೆ ಕೆಲಸ ಸಂದರ್ಭದಲ್ಲಿ ಎದುರಗುವಂತಹ ಒತ್ತಡ ಗಳ ಬಗ್ಗೆ ಮತ್ತು ಆ ಸಮಸ್ಯೆ ಗಳನ್ನು ಯಾವ ರೀತಿ ಎದುರಿಸಬೇಕು ಅನ್ನುದರ ಬಗ್ಗೆ ವಿವರಿಸಿದರು.