ನ್ಯೂಸ್ ನಾಟೌಟ್ : ಬಿಗ್ ಬಾಸ್ ಮನೆಯಲ್ಲಿರುವ ಡ್ರೋಣ್ ಪ್ರತಾಪ್ ಒಂದಿಲ್ಲೊಂದು ವಿವಾದಕ್ಕೆ ಗುರಿಯಾಗುತ್ತಿದ್ದಾರೆ. ಇದೀಗ ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಹೇಳಿಕೆ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾರೆ.ಕೊವಿಡ್ ಸಂದರ್ಭದಲ್ಲಿ ನನ್ನನ್ನು ಬಿಬಿಎಂಪಿ ಅಧಿಕಾರಿಗಳು ಕೆಟ್ಟದಾಗಿ ನಡೆಸಿಕೊಂಡರು ಎಂದು ಪ್ರತಾಪ್ ಹೇಳಿದ್ದರು.ಅವರ ಈ ಹೇಳಿಕೆ ಈಗ ಅವರಿಗೇ ಮುಳುವಾಗಿದೆ.ಬಿಬಿಎಂಪಿ ಅಧಿಕಾರಿ ಪ್ರಯಾಗ್ ಎಂಬವರು ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಪ್ರಯಾಗ್ ಎಂಬವರು 50 ಲಕ್ಷ ರೂ. ಮತ್ತು ಇನ್ನೊಬ್ಬ ಅಧಿಕಾರಿ 2 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಈ ವಿಚಾರದ ಬಗ್ಗೆ ಇಂದು ಕೋರ್ಟ್ ನಲ್ಲಿ ಆದೇಶ ಹೊರಬರುವ ಸಾಧ್ಯತೆಯಿದೆ. ಹೀಗಾಗಿ ಬಿಗ್ ಬಾಸ್ ನಿಂದ ಹೊರಬಂದ ಮೇಲೆ ಪ್ರತಾಪ್ ಗೆ ಸಾಕಷ್ಟು ಸಮಸ್ಯೆ ಎದುರಾಗಲಿದೆ.