ನ್ಯೂಸ್ ನಾಟೌಟ್ : ವ್ಯಕ್ತಿಯೊಬ್ಬರನ್ನು ಹಲವು ಬಾರಿ ಚಾಕುವಿನಿಂದ ಇರಿದು, ಬೈಕ್ಗೆ ಕಟ್ಟಿ ರಸ್ತೆಯಲ್ಲಿ ಎಳೆದೊಯ್ದಿದಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ವರದಿಯಾಗಿದೆ.
ಘಟನೆಯ ದೃಶ್ಯಾವಳಿಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಘಟನೆಯಲ್ಲಿ ಗಾಯಗೊಂಡ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ಮೃತರನ್ನು ಮೆಹದಿ ಹಸನ್ ಎಂದು ಗುರುತಿಸಲಾಗಿದ್ದು, ಪ್ರಕರಣದಲ್ಲಿ ಅನುಜ್ ಮತ್ತು ನಿತಿನ್ ಎಂಬ ಇಬ್ಬರು ಶಂಕಿತರನ್ನು ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.
ನಿಖರವಾದ ಕಾರಣ ಪೊಲೀಸ್ ತನಿಖೆಯ ಬಳಿಕವಷ್ಟೇ ತಿಳಿಯಬೇಕಿದೆ.