ನ್ಯೂಸ್ ನಾಟೌಟ್ : ಶಾಲೆಗೆ ಹೋಗಿಬರುತ್ತೇನೆ ಎಂದು ಹೇಳಿಹೋಗಿದ್ದ ಮಹಿಳೆಯೊಬ್ಬರು (ಶಿಕ್ಷಕಿಯೂ ಹೌದು) ಕೆಲ ದಿನಗಳಲ್ಲೇ ಅನುಮಾನಾಸ್ಪದ ಸಾವಿಗೀಡಾಗಿರುವ ಘಟನೆ ಮಂಡ್ಯ (Mandya) ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಮೇಲುಕೋಟೆಯಲ್ಲಿ ನಡೆದಿದೆ.
ನಾಪತ್ತೆಯಾದ ಮಹಿಳೆಯ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆಗೈದು ಮಣ್ಣಿನಲ್ಲಿ ಹೂತು ಹಾಕಿರುವ ಶಂಕೆ ವ್ಯಕ್ತವಾಗಿದೆ ಮತ್ತು ಶವ ಪತ್ತೆಯಾಗಿದೆ. ಮೃತ ಮಹಿಳೆಯನ್ನು ದೀಪಿಕಾ (28) ಎಂದು ಗುರುತಿಸಲಾಗಿದೆ.
ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಗಿರುವ ದೀಪಿಕಾ ಮೇಲುಕೋಟೆಯ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.
ಜನವರಿ 20 ರಂದು ದೀಪಿಕಾ ಶಾಲೆಗೆ ಹೋಗಿ ಬರುತ್ತೇನೆ ಎಂದು ಕೆಲಸಕ್ಕೆ ತೆರಳಿದ್ದರು. ಅದೇ ದಿನ ಮಧ್ಯಾಹ್ನದ ವೇಳೆಗೆ ನಾಪತ್ತೆಯಾಗಿದ್ದಾರೆ. ಈ ಸಂಬಂಧ ಅಂದು ಸಂಜೆ ಕುಟುಂಬಸ್ಥರು ಮೇಲುಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
ದೂರು ದಾಖಲಿಸಿಕೊಂಡು ತನಿಖೆ ನಡೆಸಿದ್ದ ಪೊಲೀಸರು ಸೋಮವಾರ(ಜ.22) ಸಂಜೆ ಮೇಲುಕೋಟೆ ಬೆಟ್ಟದ ತಪ್ಪಲಿನಲ್ಲಿ ಶವ ಪತ್ತೆಹಚ್ಚಿದ್ದಾರೆ. ಸ್ಥಳಕ್ಕೆ ಮಂಡ್ಯ ಎಸ್ಪಿ ಯತೀಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಿಕ್ಷಕಿ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಕ್ರಿಯಾಶೀಲರಾಗಿದ್ದರು ಎಂಬುದು ತಿಳಿದುಬಂದಿದೆ.
ರೀಲ್ಸ್ ಮಾಡಿಕೊಂಡು ಸೋಶಿಯಲ್ ಮೀಡಿಯಾದಲ್ಲಿ (Social Media) ಫುಲ್ ಆಕ್ಟೀವ್ ಆಗಿದ್ದ ಶಿಕ್ಷಕಿ ಇದ್ದಕ್ಕಿದ್ದಂತೆ ಶವವಾಗಿ ಪತ್ತೆಯಾಗಿದ್ದು, ಅನುಮಾನಗಳಿಗೆ ದಾರಿ ಮಾಡಿಕೊಟ್ಟಿದೆ. ಅಲ್ಲದೇ ಶಿಕ್ಷಕಿ ಆತ್ಮಹತ್ಯೆ ಮಾಡಿಕೊಂಡಿಲ್ಲ, ಯಾರೋ ದುಷ್ಕರ್ಮಿಗಳು ಕೊಲೆಗೈದು ಮೃತದೇಹ ಹೂತಿಟ್ಟಿದ್ದಾರೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.
ಪಾಂಡವಪುರ ತಾಲ್ಲೂಕಿನ ಮಾಣಿಕ್ಯಹಳ್ಳಿ ಗ್ರಾಮದ ನಿವಾಸಿಯಾಗಿದ್ದ ಶಿಕ್ಷಕಿ (Teacher) ದೀಪಿಕಾ ಸಾವಿನ ಸುತ್ತ ಹಲವು ಅನುಮಾನಗಳು ಹುಟ್ಟಿಕೊಂಡಿವೆ.