ನ್ಯೂಸ್ ನಾಟೌಟ್: ಅಯೋಧ್ಯೆಯ ಶ್ರೀರಾಮ ಮಂದಿರ ಲೋಕಾರ್ಪಣೆಗೊಂಡಿದೆ. ಈ ಪ್ರಯುಕ್ತ ದೇವಸ್ಥಾನದಲ್ಲಿ ವಿಶೇಷ ಪೂಜೆ, ಅನ್ನಸಂತರ್ಪಣೆ, ಈ ವೇಳೆ ಮುಂಬೈನಲ್ಲಿ ನಡೆದ ಶೋಭಯಾತ್ರೆ ಮೇಲೆ ಅನ್ಯಕೋಮಿನ ಗುಂಪು ದಾ* ಳಿ ನಡೆಸಿತ್ತು.
ಈ ವಿಡಿಯೋಗಳು ವೈರಲ್ ಆಗಿತ್ತು. ಈ ಘಟನೆ ನಡೆದ ಒಂದೇ ದಿನಕ್ಕೆ, ಮಹಾರಾಷ್ಟ್ರ ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಪ್ರಕರಣ ಸಂಬಂಧ ಹಲವರನ್ನು ಬಂಧಿಸಲಾಗಿದ್ದು, ಘಟನೆ ನಡೆದ ಮೀರಾ ರಸ್ತೆಯಲ್ಲಿನ ಅಕ್ರಮ ಕಟ್ಟಡ, ಅಂಗಡಿ ಮುಂಗಟ್ಟು ಹಾಗೂ ಮನೆಗಳನ್ನು ಬುಲ್ಡೋಜರ್ ಮೂಲಕ ನೆಲೆಸಮಗೊಳಿಸಲಾಗಿದೆ.
ಘಟನೆ ಬೆನ್ನಲ್ಲೇ ಮೀರಾ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಭಾರಿ ಪೊಲೀಸ್ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಇಂದು ಮತ್ತಷ್ಟು ಪೊಲೀಸ್ ಪಡೆ ನಿಯೋಜಿಸಿದ ಸರ್ಕಾರ ನೇರವಾಗಿ ಮೀರಾ ರಸ್ತೆಗೆ ಬುಲ್ಡೋಜರ್ ಹತ್ತಿಸಿದೆ. ಮೀರಾ ರಸ್ತೆಯ ಇಕ್ಕೆಲಗಳಲ್ಲಿನ ಅಕ್ರಮ ಕಟ್ಟಡ, ಅಂಗಡಿ ಮುಂಗಡ್ಡುಗಳನ್ನು ನೆಲಸಮ ಮಾಡಲಾಗಿದೆ ಎಮದು ವರದಿ ತಿಳಿಸಿದೆ.
ಬಂಧಿತರು ಮೀರಾ ರಸ್ತೆಯಲ್ಲಿ ಅಂಗಡಿ ಮುಂಗಟ್ಟುಗಳಲ್ಲಿ ಕೆಲಸ ಮಾಡುತ್ತಿದ್ದವರು ಹಾಗೂ ಮಾಲೀಕರೂ ಆಗಿದ್ದಾರೆ ಎಂದು ವರದಿ ತಿಳಿಸಿದೆ. ಪೂರ್ವನಿಯೋಜಿತ ದಾಳಿ ಕುರಿತ ಹಲವು ಮಾಹಿತಿ ಕಲೆ ಹಾಕಿದ ಪೊಲೀಸರು ಪರಾರಿಯಾಗಿರುವ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಘಟನೆ ನಡೆದ ರಾತ್ರಿ ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಈ ಕುರಿತು ಟ್ವೀಟ್ ಮೂಲಕ ಎಚ್ಚರಿಕೆ ನೀಡಿದ್ದರು.