ನ್ಯೂಸ್ ನಾಟೌಟ್ : ‘ಕೇಸರಿ ಧ್ವಜವನ್ನು ಅವಮಾನಿಸುವ ರೀಲ್ ಮಾಡಿ ಅದನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ ತೆಲಂಗಾಣದ ಸಂಗಾರೆಡ್ಡಿ ಎಂಬ ಪ್ರದೇಶದ ಮುಸ್ಲಿಂ ವ್ಯಕ್ತಿಯನ್ನು ಗುಂಪೊಂದು ಥಳಿಸಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ ಘಟನೆ ನಡೆದಿದೆ.
ರೀಲ್ ನಲ್ಲಿ ಮುಸ್ಲಿಂ ವ್ಯಕ್ತಿ ಕೇಸರಿ ಧ್ವಜಕ್ಕೆ ಅವಮಾನ ಮಾಡುವ ರೀತಿಯಲ್ಲಿ ವರ್ತಿಸಿದ್ದು ಅಲ್ಲದೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡಲಾಗಿದೆ. ಇತ್ತ ವಿಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಗುಂಪೊಂದು ವ್ಯಕ್ತಿಯನ್ನು ಹಿಡಿದು ಥಳಿಸಿ ಬಳಿಕ ಆತನಿಂದ ಜೈ ಶ್ರೀರಾಮ್ ಎಂದು ಹೇಳಿವಂತೆ ಒತ್ತಡ ಹೇರಿ ಹೇಳಿಸಿದ್ದಾರೆ. ಅದಾದ ಬಳಿಕ ಆತನನ್ನು ಬೆತ್ತಲೆಗೊಳಿಸಿ ಬೀದಿಯಲ್ಲಿ ಮೆರವಣಿಗೆ ಮಾಡಿಲಾಗಿದೆ ಎಂದು ವರದಿ ತಿಳಿಸಿದೆ.
ಹಿಂದೂಗಳ ಭಾವನೆಗೆ ಧಕ್ಕೆ ಉಂಟು ಮಾಡಿದ ಆರೋಪಕ್ಕೆ ಸಂಬಂಧಿಸಿ ಆರೋಪಿಯ ವಿರುದ್ಧ ಗ್ರಾಮಸ್ಥರು ದೂರು ದಾಖಲಿಸಿದ್ದು. ಆತನ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 153(ಎ), 295-ಎ, 505(2) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಇತ್ತ ಹಲ್ಲೆಗೊಳಗಾದ ಮುಸ್ಲಿಂ ವ್ಯಕ್ತಿಯು ಹಲ್ಲೆ ನಡೆಸಿದ ಗ್ರಾಮಸ್ಥರ ವಿರುದ್ಧ ದೂರು ನೀಡಿದ್ದು, ಪೊಲೀಸರು ತಪ್ಪಿತಸ್ಥರ ವಿರುದ್ಧ ಐಪಿಸಿ ಸೆಕ್ಷನ್ 341, 323, 505(2), ಮತ್ತು 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ ಎನ್ನಲಾಗಿದೆ.