ನ್ಯೂಸ್ ನಾಟೌಟ್ : ಸುಳ್ಯ ತಾಲೂಕು ನಗರ ಪಂಚಾಯತ್ ಆವರಣದಲ್ಲಿ ಯುದ್ಧಸ್ಮಾರಕವೊಂದು ನಿರ್ಮಾಣವಾಗಿದ್ದು,ಈ ಪ್ರಯುಕ್ತ ಇಂದು (25-01-2024ರ ಗುರುವಾರ) ವಿಶೇಷ ಕಾರ್ಯಕ್ರಮಗಳು ನಡೆದವು. ಸಂಜೆ 4.30ಕ್ಕೆ ಸರಿಯಾಗಿ ಯುದ್ಧ ಸ್ಮಾರಕಕ್ಕೆ ಗೌರವ ನಮನ ಕಾರ್ಯಕ್ರಮ ನಡೆಯಿತು.
ಈ ವೇಳೆ ನಿವೃತ್ತ ಕರ್ನಲ್ ಹಾಗೂ ಹಿರಿಯ ವಿದ್ಯಾರ್ಥಿ ಸಂಘ ಯೂನಿರ್ವಸಿಟಿ ಕಾಲೇಜು ಮಂಗಳೂರು ಇದರ ಅಧ್ಯಕ್ಷ ಶ್ರೀ ಎನ್.ಎಸ್ . ಭಂಡಾರಿ , ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷರಾದ ಡಾ|ಕೆ.ವಿ. ಚಿದಾನಂದ,ಆರಕ್ಷಕ ಠಾಣೆ ಸುಳ್ಯ ಇದರ ವೃತ್ತ ನಿರೀಕ್ಷಕರಾದ ಮೋಹನ್ ಕೊಠಾರಿ ಯುದ್ಧ ಸ್ಮಾರಕಕ್ಕೆ ಗೌರವಾರ್ಪಣೆ ಸಲ್ಲಿಸಿದರು.ಮಾಜಿ ಸಚಿವ ಎಸ್.ಅಂಗಾರರು ಯುದ್ಧ ಸ್ಮಾರಕವನ್ನು ಲೋಕಾರ್ಪಣೆ ಗೈದರು.ಮಾಜಿ ಸಚಿವ ಎಸ್.ಅಂಗಾರರು ಯುದ್ಧ ಸ್ಮಾರಕವನ್ನು ಲೋಕಾರ್ಪಣೆ ಗೈದರು.
ಸುಳ್ಯ ತಹಶೀಲ್ದಾರರಾದ ಜಿ.ಮಂಜುನಾಥ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.ಸುಳ್ಯ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ,ಮಂಗಳೂರು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಶ್ರೀಕಾಂತ್ ಶೆಟ್ಟಿ,ಪುತ್ತೂರು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಎಂ.ಕೆ. ನಾರಾಯಣ ಭಟ್, ಸುಳ್ಯ ಮಾಜಿ ಸೈನಿಕರ ಸಂಘದ ಅಧ್ಯಕ್ಷ ದೇರಣ್ಣ ಗೌಡ,ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಹಾಗೂ ಸದಸ್ಯರಾದ ವಿನಯ ಕುಮಾರ್ ಕಂದಡ್ಕ , ಸುಳ್ಯ ನಗರ ಪಂಚಾಯತ್ ಅಧ್ಯಕ್ಷ ಹಾಗೂ ಸದಸ್ಯರಾದ ಎಂ.ವೆಂಕಪ್ಪ ಗೌಡ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಈ ವೇಳೆ ಸುಳ್ಯ ಮಾಜಿ ಸೈನಿಕರ ಸಂಘದ ಅಧ್ಯಕ್ಷ ಜಗದೀಶ ಕೆ.ಪಿ.,ಸುಳ್ಯ ಮಾಜಿ ಸೈನಿಕರ ಸಂಘದ ಕಾರ್ಯದರ್ಶಿ ಮೋನಪ್ಪ ಗೌಡ ಅಡ್ಕಬಳೆ, ಸುಳ್ಯ ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಹೆಚ್.ಸುಧಾಕರ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ನಗರ ಪಂಚಾಯತ್ ಸದಸ್ಯರುಗಳಾದ ಸುಧಾಕರ ಕುರುಂಜಿಭಾಗ್, ಬುದ್ದ ನಾಯ್ಕ, ಬಾಲಕೃಷ್ಣ ಭಟ್ ಕೊಡೆಂಕಿರಿ, ನಾರಾಯಣ ಶಾಂತಿನಗರ, ಶರೀಫ್ ಕಂಠಿ, ಶಶಿಕಲಾ ನೀರಬಿದಿರೆ, ಪೂಜಿತಾ ಕೆ.ಯು., ಸುಶೀಲಾ ಕಲ್ಲುಮುಟ್ಲು, ಶಿಲ್ಪಾ ಸುದೇವ್, ಕಿಶೋರಿ ಶೇಟ್, ಶೀಲಾ ಕುರುಂಜಿ, ಪ್ರವಿತಾ ಪ್ರಶಾಂತ್, ಸರೋಜಿನಿ ಪೆಲತಡ್ಕ, ನಗರ ಪಂಚಾಯತ್ ಮುಖ್ಯಾಧಿಕಾರಿ ಎಂ.ಹೆಚ್.ಸುಧಾಕರ , ಸೈನಿಕರ ಸಂಘದ ಕಾರ್ಯದರ್ಶಿ ಮೋನಪ್ಪ ಗೌಡ ಅಡ್ಕಬಳೆ, ಸೈನಿಕರ ಸಂಘದ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮದಲ್ಲಿ ಇದ್ದರು.ಸಂಜೆ ಕೆ.ಆರ್ ಗೋಪಾಲ ಕೃಷ್ಣ ,ಭಾವನಾ ಬಳಗ ಸುಳ್ಯ ಇವರಿಂದ ದೇಶಭಕ್ತಿ ಗೀತ ಗಾಯನ ಕಾರ್ಯಕ್ರಮ ನಡೆಯಲಿದೆ.