ನ್ಯೂಸ್ ನಾಟೌಟ್: ಬಿಜೆಪಿಯಿಂದ ದೂರ ಸರಿದು ಪಕ್ಷೇತರ ಅಭ್ಯರ್ಥಿಯಾಗಿ ಪುತ್ತೂರಿನಲ್ಲಿ ನಿಂತು ಸ್ಪರ್ಧಿಸಿ ಅಲ್ಪ ಮತಗಳ ಅಂತರದಿಂದ ಸೋಲು ಅನುಭವಿಸಿದ ಅರುಣ್ ಕುಮಾರ್ ಪುತ್ತಿಲ ಕೆಲವೇ ದಿನಗಳಲ್ಲಿ ಬಿಜೆಪಿ ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಬಗ್ಗೆ ಬಿಜೆಪಿ ಪಕ್ಷದೊಳಗೆ ಗುಸುಗುಸು ಆರಂಭವಾಗಿದ್ದು ಶೀಘ್ರವೇ ಅವರನ್ನು ಬಿಜೆಪಿಗೆ ಕರೆ ತರುವ ಎಲ್ಲ ಸಾಧ್ಯತೆ ಹೆಚ್ಚಿದೆ.
ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ಅತೃಪ್ತರನ್ನೆಲ್ಲ ಬಿಜೆಪಿಗೆ ಮತ್ತೆ ಸೇರಿಸುವ ಗುರಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೊಂದಿದ್ದಾರೆ ಎನ್ನಲಾಗುತ್ತಿದೆ. ಸೂಕ್ತ ಸ್ಥಾನಮಾನ ಸಿಕ್ಕಿದರೆ ಬಿಜೆಪಿಗೆ ಅರುಣ್ ಕುಮಾರ್ ಪುತ್ತಿಲ ಸೇರುವ ಸಾಧ್ಯತೆಗಳಿವೆ ಎಂದು ಕೂಡ ಚರ್ಚೆಯಾಗುತ್ತಿದೆ. ಈ ಬಗ್ಗೆ ಅಂತಿಮ ತೀರ್ಮಾನ ಇನ್ನಷ್ಟೆ ಹೊರ ಬೀಳಬೇಕಿದೆ. ಸಹಜವಾಗಿಯೇ ಇದು ಜನರಲ್ಲಿ ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಅರುಣ್ ಕುಮಾರ್ ಪುತ್ತಿಲ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸವಾಲ್ ಹಾಕಿ ಪಕ್ಷೇತರರಾಗಿ ನಿಂತಿದ್ದರು. ಅಲ್ಪ ಮತಗಳ ಅಂತರದಿಂದ ಸೋತಿದ್ದರು. ಆದರೆ ಬಿಜೆಪಿ ಭದ್ರಕೋಟೆ ಎನಿಸಿಕೊಂಡಿದ್ದ ಪುತ್ತೂರಿನಲ್ಲಿ ಬಿಜೆಪಿಯನ್ನು ಮೂರನೇ ಸ್ಥಾನಕ್ಕೆ ತಳ್ಳುವಂತೆ ಮಾಡಿದ್ದರು. ಇಬ್ಬರ ಜಗಳದಲ್ಲಿ ಮೂರನೆಯವನಿಗೆ ಲಾಭ ಅನ್ನುವಂತೆ ಕಾಂಗ್ರೆಸ್ ಅಭ್ಯರ್ಥಿಯಾಗಿ ನಿಂತಿದ್ದ ಅಶೋಕ್ ಕುಮಾರ್ ರೈ ಭರ್ಜರಿ ಗೆಲುವು ಸಾಧಿಸಿದ್ದರು.