ನ್ಯೂಸ್ ನಾಟೌಟ್ : ಈ ಬಾರಿ ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ ಇದುವೇ ನನ್ನ ಕೊನೆಯ ಚುನಾವಣೆ. ಮೋದಿ ಅಧಿಕಾರ ಮುಂದುವರಿದರೆ, ಚುನಾವಣಾ ರಾಜಕೀಯಿಂದ ದೂರ ಉಳಿಯುವುದಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ.
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಇಂಡಿಯಾ ಮೈತ್ರಿ ಕೂಟ ಒಡೆದು ಹೋಗಿರುವುದ ಜಗಜ್ಜಾಹೀರಾಗಿದೆ. ಆದರೆ ಗೆಲುವಿಗಾಗಿ ಶತಾಯಗತಾಯ ಪ್ರಯತ್ನಿಸುತ್ತಿರುವ ಕಾಂಗ್ರೆಸ್ ಇದೀಗ ಮಾತಿನ ಮೂಲಕ ಯುದ್ಧ ಆರಂಭಿಸಿದೆ.
ನರೇಂದ್ರ ಮೋದಿ ಮತ್ತೆ ಪ್ರಧಾನಿಯಾದರೆ, ಈ ದೇಶದಲ್ಲಿ ಪ್ರಜಾಪ್ರಭುತ್ವ ಇರುವುದಿಲ್ಲ. ಚುನಾವಣೆ ಇಲ್ಲವೇ ಇಲ್ಲ. ಮೋದಿ ಸರ್ವಾಧಿಕಾರ ಪ್ರಾಬಲ್ಯ ಹೆಚ್ಚಾಗಲಿದೆ. ಹೀಗಾಗಿ ಮೋದಿ ಮತ್ತೆ ಪ್ರಧಾನಿಯಾದರೆ ನಾನು ರಾಜಕಾರಣದಿಂದ ನಿವೃತ್ತಿಪಡೆಯುತ್ತೇನೆ ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಭಾವನಾತ್ಮಕವಾಗಿ ಹಾಗೂ ಮೋದಿಯಿಂದ ದೇಶವೇ ಸರ್ವನಾಶವಾಗಲಿದೆ ಅನ್ನೋ ಎಚ್ಚರಿಕೆಯನ್ನೂ ನೀಡಿದ್ದಾರೆ ಎಂದು ವರದಿ ತಿಳಿಸಿದೆ.
ಕೇಂದ್ರ ಬಿಜೆಪಿ ಸರ್ಕಾರ ಇಡಿ ಬಳಸಿ ಎಲ್ಲರಿಗೂ ನೋಟಿಸ್ ನೀಡುತ್ತಿದೆ. ಇಡಿಗೆ ಹೆದರಿ ಹಲವು ನಾಯಕರು ಬಿಜೆಪಿ ಸೇರುತ್ತಿದ್ದಾರೆ. ಪಕ್ಷಗಳನ್ನೇ ಬೆದರಿಸುತ್ತಿದ್ದಾರೆ. ಇದರಿಂದ ಇಂಡಿಯಾ ಒಕ್ಕೂಟದಿಂದ ಕೆಲ ಪಕ್ಷಗಳು ಬಿಜೆಪಿ ಜೊತೆ ಸೇರಿಕೊಳ್ಳುತ್ತಿದೆ. ಕೆಲ ಪಕ್ಷಗಳು ಮೈತ್ರಿಯಿಂದ ದೂರ ಉಳಿಯುತ್ತಿದೆ. ದೇಶದ ನಾಗರೀಕರಿಗೆ ಇದು ಕೊನೆಯ ಅವಕಾಶ. ಈ ಚುನಾವಣೆಯಲ್ಲಿ ನೀವು ಬಿಜೆಪಿ ವಿರುದ್ಧ ಮತ ಚಲಾಯಿಸಿದರೆ ದೇಶ ಉಳಿಯಲಿದೆ. ಇಲ್ಲದಿದ್ದರೆ ಮುಂದೆ ನಿಮಗೆ ಮತ ಚಲಾಯಿಸುವ ಅವಕಾಶವೂ ಇರವುದಿಲ್ಲ. ಬಿಜೆಪಿ ತನ್ನ ಸರ್ವಾಧಿಕಾರದಿಂದ ಎಲ್ಲಾ ಅವಕಾಶಗಳನ್ನು ಕಸಿದುಕೊಳ್ಳಲಿದೆ ಎಂದು ಖರ್ಗೆ ಎಚ್ಚರಿಸಿದ್ದಾರೆ.
2024ರ ಲೋಕಸಭಾ ಚುನಾವಣೆ ದೇಶದ ಮತದಾರರಿಗೆ ಕೊನೆಯ ಚುನಾವಣೆ. ಈ ಚುನಾವಣೆಯಲ್ಲಿ ಮತ್ತೆ ಮೋದಿಯನ್ನು ಗೆಲ್ಲಿಸಿದರೆ, ಭಾರತದ ಕತೆ ಮುಗೀತು ಎಂದು ಪರೋಕ್ಷವಾಗಿ ಖರ್ಗೆ ಮತದಾರರಿಗೆ ಎಚ್ಚರಿಕೆ ನೀಡಿದ್ದಾರೆ. ಮೊಹಬ್ಬತ್ ಕಿ ದುಕಾನ್ ಮೂಲಕ ರಾಹುಲ್ ಗಾಂಧಿ ದೇಶವನ್ನೂ ಒಗ್ಗೂಡಿಸುತ್ತಿದ್ದಾರೆ. ಆದರೆ ಬಿಜೆಪಿ ಹಾಗೂ ಆರ್ಎಸ್ಎಸ್ ಭಾರತವನ್ನು ಒಡೆದು ಆಳುತ್ತಿದೆ ಎಂದಿದ್ದಾರೆ.