ನ್ಯೂಸ್ ನಾಟೌಟ್: ಹನುಮಧ್ವಜ ಬಳಿಕ ಇದೀಗ ಹಸಿರು ಬಾವುಟ ತೆರವು ವಿವಾದವಾಗಿದೆ. ಮಂಡ್ಯದ ಕೆರಗೋಡು ಘಟನೆಯ ಬಳಿಕ ಬೆಂಗಳೂರಿನ ಶಿವಾಜಿನಗರಕ್ಕೂ ಧ್ವಜದ ವಿಚಾರದಲ್ಲಿ ಗಲಾಟೆ ಶುರುವಾಗಿದೆ.
ಶಿವಾಜಿನಗರದ (Shivajinagar) ಚಾಂದಿನಿ ಚೌಕ್ನ ಬಳಿಯಲ್ಲಿ ಬಿಬಿಎಂಪಿ ಅಳವಡಿಕೆ ಮಾಡಿರುವ ವಿದ್ಯುತ್ ಕಂಬದಲ್ಲಿ ಹಸಿರು ಧ್ವಜವನ್ನು ಹಾರಿಸಲಾಗಿತ್ತು. ಇದರ ಫೋಟೋ ತೆಗೆದು ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೆ ಮಾಡುವ ಕೆಲಸ ಶುರು ಮಾಡಿದ ಯುವಕರು, ಬೆಂಗಳೂರು ಪೊಲೀಸರಿಗೆ ಟ್ಯಾಗ್ ಮಾಡಲಾಗಿತ್ತು, ಈ ಬಗ್ಗೆ ಯತ್ನಾಳ್ ಟ್ವೀಟ್ ಮಾಡಿದ್ದು ವಿವಾದಕ್ಕೆ ತಿರುಗಿತು.
ಇದರಿಂದ ಎಚ್ಚೆತ್ತ ಪೊಲೀಸರು ಸ್ಥಳಕ್ಕೆ ತಕ್ಷಣವೇ ಬಂದು, ಬಳಿಕ ಸ್ಥಳೀಯರನ್ನು ಬಳಸಿಕೊಂಡು ಹಸಿರು ಧ್ವಜ ತೆರವು ಮಾಡೋ ಕೆಲಸ ಮಾಡಿದರು. ನಂತರ ಅದೇ ಜಾಗದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಲಾಯಿತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿವಹಿಸಿದ್ದಾರೆ.
ಕಳೆದ 30 ವರ್ಷಗಳಿಂದ ದರ್ಗಾದ ಬಾವುಟ ಹಾಕಲಾಗಿತ್ತು. ಪೊಲೀಸರು ಬಾವುಟ ಹಾಕಿರುವ ಬಗ್ಗೆ ಮಾಹಿತಿ ಕೇಳಿದ್ರು. ಬಳಿಕ ನೀವೇ ಬಾವುಟವನ್ನ ತೆರವುಗೊಳಿಸುವಂತೆ ಸೂಚಿಸಿದ್ರು. ಪೊಲೀಸರ ಸೂಚನೆಯಂತೆ ಹಸಿರು ಬಾವುಟ ತೆರವುಗೊಳಿಸಿ ರಾಷ್ಟ್ರೀಯ ಬಾವುಟವನ್ನ ಹಾಕಲಾಗಿದೆ ಎಂದು ಸ್ಥಳಿಯ ಮುಸ್ಲಿಂ ಮುಖಂಡರು ತಿಳಿಸಿದ್ದಾರೆ.