ತುಮಕೂರು: ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಎಎಸ್ಐ ಉಮೇಶಯ್ಯ ಅಪರಾಧಿ ಎಂದು ತುಮಕೂರು ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಜನವರಿ 31 ರಂದು ಶಿಕ್ಷೆ ಪ್ರಮಾಣವನ್ನು ನ್ಯಾಯಾಲಯ ಪ್ರಕಟಿಸಲಿದೆ. 2017ರ ಜ.15ರಂದು ತುಮಕೂರಿನ ಅಂತರಸನಹಳ್ಳಿ ಸೇತುವೆ ಬಳಿ ಅತ್ಯಾಚಾರವೆಸಗಿದ್ದ ಎಎಸ್ಐ ಉಮೇಶಯ್ಯ ಸದ್ಯ ಜೈಲು ಸೇರುವಂತಾಗಿದೆ. ತುಮಕೂರು ಗ್ರಾಮಾಂತರ ಠಾಣೆ ಎಎಸ್ಐ ಆಗಿದ್ದ ಉಮೇಶಯ್ಯ, ಡ್ರಾಪ್ ಕೊಡುವ ನೆಪದಲ್ಲಿ ಬೊಲೆರೊ ವಾಹನದಲ್ಲಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ.
- +91 73497 60202
- [email protected]
- November 23, 2024 5:21 AM