ನ್ಯೂಸ್ ನಾಟೌಟ್ : ಮಹಿಳೆಯ ಕತ್ತಿನಿಂದ ಚಿನ್ನದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದ ಕಳ್ಳರನ್ನು ಬೆಳ್ಳಾರೆ ಪೊಲೀಸರು ವಶಕ್ಕೆ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಪಾಂಬಾರ್ ಎಂಬಲ್ಲಿ ಫೆ.೧ರಂದು ಬೈಕ್ ನಲ್ಲಿ ಬಂದಿದ್ದ ಅಪರಿಚಿತರು ಮಹಿಳೆಯೊಬ್ಬರ ಚಿನ್ನದ ಸರವನ್ನು ಕದ್ದು ಎಸ್ಕೇಪ್ ಆಗಿದ್ದರು. ಈ ಪ್ರಕರಣದ ತನಿಖೆಯನ್ನು ನಡೆಸಿದ ಬೆಳ್ಳಾರೆ ಪೊಲೀಸರು ಇದೀಗ ಮುಕ್ವೆ, ನರಿಮೊಗರು ಗ್ರಾಮ, ಪುತ್ತೂರು ನಿವಾಸಿ ನೌಶಾದ್ ಬಿ ಎ (36) ಹಾಗೂ ಸುಲಿಗೆಗೆ ಸಹಕರಿಸಿದ ಉದ್ಯಾವರ ಕಾಸರಗೋಡು ನಿವಾಸಿ ಚಂದ್ರಮೋಹನ್ (42) ಎಂಬವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರಿಂದ ರೂ 80,000/- ಮೌಲ್ಯದ ಚಿನ್ನದ ಸರ ಮತ್ತು ಕೃತ್ಯಕ್ಕೆ ಬಳಸಿದ ರೂ. 1,00,000/ ಮೌಲ್ಯದ ಸ್ಕೂಟರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಪ್ರಕರಣದ ತನಿಖೆ ನಡೆಸುವುದಕ್ಕಾಗಿ ಜಿಲ್ಲಾ ಪೊಲೀಸ್ ಅಧೀಕ್ಷಕ ಸಿ.ಬಿ ರಿಷ್ಯಂತ್ , ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಧರ್ಮಪ್ಪ ಮತ್ತು ರಾಜೇಂದ್ರ ಮುಂದಾಳತ್ವದಲ್ಲಿ ಅರುಣ್ ನಾಗೇಗೌಡ, ಪುತ್ತೂರು ಉಪವಿಭಾಗ ಪೊಲೀಸ್ ಉಪಾಧೀಕ್ಷಕ ಅರುಣ್ ನಾಗೇಗೌಡ, ಸುಳ್ಯ ವೃತ್ತ ನಿರೀಕ್ಷಕ ಮೋಹನ್ ಕೊಠಾರಿ , ಬೆಳ್ಳಾರೆ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಸಂತೋಷ್ ಬಿ.ಪಿ ಮತ್ತು ಅಶೋಕ್ ಸಿಎಂ ರವರ ಎರಡು ವಿಶೇಷ ತಂಡಗಳು ಪ್ರಕರಣವನ್ನು ಭೇದಿಸುವಲ್ಲಿ ವಿಶೇಷವಾಗಿ ಶ್ರಮಿಸಿವೆ. ತನಿಖಾ ತಂಡದಲ್ಲಿ ಎ ಎಸ್ ಐ ದಾಮೋದರ ನಾಯ್ಕ್, ಸಿಬ್ಬಂದಿಗಳಾದ ನವೀನ್ ಕಟ್ಟತ್ತಾರು , ಸತೀಶ್ ಬಿ, ಕೃಷ್ಣಪ್ಪ, ಚಂದ್ರಶೇಖರಗೌಡ, ಚಂದ್ರಶೇಖರ ಗೆಜ್ಜಳ್ಳಿ, ಮಂಜುನಾಥ, ಚೇತನ, ಪ್ರವೀಣ ಬಾರ್ಕಿ, ಸಂತೋಷ ಕೆ ಜಿ, ಜಿಲ್ಲಾ ತಾಂತ್ರಿಕ ವಿಭಾಗದ ದಿವಾಕರ, ಸಂಪತ್ ಮತ್ತಿತರರು ಸಹಕರಿಸಿದ್ದಾರೆ.