ನ್ಯೂಸ್ ನಾಟೌಟ್:ತರಕಾರಿ, ದಿನಸಿ ವಸ್ತುಗಳ ಬೆಲೆ ಗಗನಕ್ಕೇರಿದೆ.ಬಡವರ ಪಾಲಿಗೆ ಜೀವನವೇ ಕಷ್ಟವಾಗಿ ಪರಿಣಮಿಸಿದೆ.ರಾಜ್ಯ ಸರಕಾರ ಅಕ್ಕಿಯನ್ನು ಬಡವರಿಗೆ ನೀಡುತ್ತಿದೆ.ಈ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಮಾರಾಟ ಮಾಡಲು ತೀರ್ಮಾನಿಸಿರುವ ಭಾರತ್ ಬ್ರ್ಯಾಂಡ್ ಅಕ್ಕಿಗೆ ಇಂದು ಸಂಜೆ 4 ಗಂಟೆಗೆ ಬೆಂಗಳೂರಿನಲ್ಲಿ ಚಾಲನೆ ಸಿಗಲಿದೆ.
ಒಂದು ಕೆಜಿ ಭಾರತ್ ಬ್ರ್ಯಾಂಡ್ ಅಕ್ಕಿಗೆ 29 ರೂ.ದರ ನಿಗದಿ ಮಾಡಲಾಗಿದೆ.ದೇಶದ ಬಡವರಿಗೆ ಅತ್ಯಂತ ಕಡಿಮೆ ದರದಲ್ಲಿ ಪೌಷ್ಠಿಕ ಅಹಾರ ದೊರಕಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ.
ಪ್ರಸ್ತುತ ಮಾರುಕಟ್ಟೆಯಲ್ಲಿ ಎಲ್ಲ ವಸ್ತುಗಳ ಬೆಲೆ ಹೆಚ್ಚುತ್ತಿದೆ. ಬೆಲೆ ಏರಿಕೆಯ ಬಿಸಿ ಬಡವರನ್ನು ಅತ್ಯಂತ ಹೆಚ್ಚಾಗಿ ತಟ್ಟಲಾರಂಭಿಸಿದೆ. ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಈ ಮಹತ್ವದ ನಿರ್ಧಾರ ಕೈಗೊಂಡಿದೆ ಎಂದು ತಿಳಿದು ಬಂದಿದೆ. ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನ ದೇಶದಲ್ಲಿ ಸಾಕಷ್ಟು ಬದಲಾವಣೆ ಆಗಲಿದೆ ಎನ್ನುವ ಮಾಹಿತಿಯಿದೆ.ಸದ್ಯ ದೇಶದ ಜನರು ಹಣದುಬ್ಬರತೆಯ ಪರಿಸ್ಥಿಯನ್ನು ತಡೆಗಟ್ಟುವ ಸಲುವಾಗಿ ತೆಗೆದುಕೊಂಡಿರುವ ನಿರ್ಧಾರ ಜನರ ಮೆಚ್ಚುಗೆ ಗಳಿಸಿದೆ.
ಇನ್ನು ಈ ಅಕ್ಕಿ ರಿಲಯನ್ಸ್, ಫ್ಲಿಪ್ಕಾರ್ಟ್, ಬಿಗ್ ಬಾಸ್ಕೆಟ್ ಅಷ್ಟೇ ಅಲ್ಲದೆ ಆನ್ಲೈನ್ನಲ್ಲೂ ಭಾರತ್ ಬ್ರ್ಯಾಂಡ್ ಅಕ್ಕಿ ಖರೀದಿ ಮಾಡಬಹುದು. ಇನ್ನೊಂದು ವಾರದಲ್ಲಿ ಇತರೆ ಸ್ಟೋರ್ಗಳಲ್ಲೂ ಭಾರತ್ ಅಕ್ಕಿ ಲಭ್ಯವಾಗಲಿದೆ ಅನ್ನುವ ಮಾಹಿತಿಯಿದೆ.