ನ್ಯೂಸ್ ನಾಟೌಟ್: ಮಂಗಳೂರಿನ ಹೊರವಲಯದಲ್ಲಿರುವ ಇಂಜಿನಿಯರಿಂಗ್ ಕಾಲೇಜೊಂದರ ಮೂವತ್ತಕ್ಕೂ ಅಧಿಕ ವಿದ್ಯಾರ್ಥಿಗಳು ಕಲುಷಿತ ಆಹಾರ ಸೇವಿಸಿ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ.
ನಗರದ ನಾನಾ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಮಂಗಳವಾರ ರಾತ್ರಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಂಗಳೂರಿನ ಹೊರವಲಯದ ಕಾಲೇಜಿನ ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ ವಿದ್ಯಾರ್ಥಿಗಳು ಭೇದಿ, ಹೊಟ್ಟೆ ನೋವಿನಿಂದ ಅಸ್ಬಸ್ಥರಾಗಿದ್ದಾರೆ.
ಅವರನ್ನು ಕೂಡಲೇ ಆಸ್ಪತ್ರೆಗಳಿಗೆ ದಾಖಲಿಸಲಾಯಿತು. ಹಾಸ್ಟೆಲ್ ನಲ್ಲಿ ಆಹಾರ ಸೇವಿಸಿದ 35 ವಿದ್ಯಾರ್ಥಿಗಳು ಭೇದಿ, ಹೊಟ್ಟೆನೋವಿನಿಂದ ಅಸ್ವಸ್ಥರಾಗಿದ್ದಾರೆ. ಅಲ್ಲಿಗೆ ನಾನು ತಂಡದೊಂದಿಗೆ ಹೋಗಿ ಪರಿಶೀಲನೆ ನಡೆಸಿದ್ದೇನೆ. ಆಹಾರದ ಸ್ಯಾಂಪಲ್ ಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅಸ್ವಸ್ಥರಾದ ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ತಿಳಿಸಿದ್ದಾರೆ.