ನ್ಯೂಸ್ ನಾಟೌಟ್ : ಯುವ ಜನತೆಗೆ ದೇಶ ಸೇವೆ ಮಾಡುವ ಅವಕಾಶ ಕಲ್ಪಿಸುವ ಉದ್ದೇಶದಿಂದ ರಕ್ಷಣಾ ಇಲಾಖೆ ‘ಅಗ್ನಿಪಥ್’ ಎಂಬ ವಿಶೇಷ ಯೋಜನೆ ಜಾರಿಗೆ ತಂದಿದೆ. ಇದರ ಮೂಲಕ ವಾಯುಪಡೆಯಲ್ಲಿ ಅಗ್ನಿವೀರ್ ವಾಯು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಗ್ನಿಪಥ್ ಮೂಲಕ ಈಗಾಗಲೇ ಸಾವಿರಾರು ಯುವಜನತೆ ರಾಷ್ಟ್ರ ರಕ್ಷಣೆಗಾಗಿ ನಾಲ್ಕು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.
ಹುದ್ದೆಗಳ ವಿವರ: ಅವಿವಾಹಿತ ಯುವಕ/ಯುವತಿಯರು ಅಗ್ನಿವೀರ್ ಹುದ್ದೆಯ ನೇಮಕಾತಿಯಲ್ಲಿ ಪಾಲ್ಗೊಳ್ಳಬಹುದು. ಎಷ್ಟು ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ ಎಂಬ ನಿರ್ದಿಷ್ಟ ಸಂಖ್ಯೆಯನ್ನು ಅಧಿಸೂಚನೆಯಲ್ಲಿ ತಿಳಿಸಿಲ್ಲ.
ವಿದ್ಯಾರ್ಹತೆ: ಪಿಯುಸಿ (ಗಣಿತ, ಭೌತಶಾಸ್ತ್ರ ಮತ್ತು ಇಂಗ್ಲಿಷ್)/ ಮೂರು ವರ್ಷಗಳ ಡಿಪ್ಲೊಮಾ ಪದವಿ ಪಡೆದಿರಬೇಕು. ವಯೋಮಿತಿ: ಜನವರಿ 2, 2004ರಿಂದ ಜುಲೈ 2, 2007ರ ನಡುವೆ ಜನಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ವೇತನ: ಈ ಹುದ್ದೆಗಳಿಗೆ ಮೊದಲ ವರ್ಷ 30,000, ಎರಡನೇ ವರ್ಷದಲ್ಲಿ 33,000, ಮೂರನೇ ವರ್ಷದಲ್ಲಿ 36,500 ನಾಲ್ಕನೇ ವರ್ಷ 40,000 ರೂ. ವೇತನವಿದೆ. ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಎಲ್ಲಾ ವರ್ಗದ ಅಭ್ಯರ್ಥಿಗಳು 550 ರೂ ಅರ್ಜಿ ಶುಲ್ಕ ಪಾವತಿಸಬೇಕು.
ಆಯ್ಕೆ ಪ್ರಕ್ರಿಯೆ: ಲಿಖಿತ, ದೈಹಿಕ ಸಾಮರ್ಥ್ಯ, ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ. ಜನವರಿ 17ರಿಂದಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಫೆಬ್ರವರಿ 6 ಅಂತಿಮ ದಿನವೆಂದು ನಿಗದಿಪಡಿಸಲಾಗಿತ್ತು. ಆದರೆ, ಇದೀಗ ಅರ್ಜಿ ಸಲ್ಲಿಕೆ ದಿನವನ್ನು ಫೆ.11ರವರೆಗೆ ವಿಸ್ತರಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ indianairforce.nic.in ಅಥವಾ agnipathvayu.cdac.in/AV/ ಈ ಜಾಲತಾಣಕ್ಕೆ ಭೇಟಿ ನೀಡಿಲು ಸೂಚಿಸಲಾಗಿದೆ.