ನ್ಯೂಸ್ ನಾಟೌಟ್ : ರಾಜ್ಯಕ್ಕೆ ಅಮಿತ್ ಶಾ ಆಗಮನ ವೇಳೆಯಲ್ಲಿ ಅಮಿತ್ ಶಾ ಎದುರಲ್ಲೇ ಮೈಸೂರು – ಕೊಡಗು ಸಂಸದ ಪ್ರತಾಪ್ ಸಿಂಹ ಹಾಗೂ ಮಾಜಿ ಶಾಸಕ ಪ್ರೀತಂ ಗೌಡ ಪರಸ್ಪರ ಜಗಳ ಮಾಡಿಕೊಂಡಿದ್ದಾರೆನ್ನುವ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣದಿಂದ ವರದಿಯಾಗಿದೆ.
ಕೇಂದ್ರ ಗೃಹ ಸಚಿವರ ಸ್ವಾಗತಕ್ಕೆ ಲೈನಪ್ ಬಗ್ಗೆ ಸೂಚನೆ ಹಗೂ ಪೊಲೀಸರ ಅನುಮತಿಯನ್ವಯ ನಿಲ್ಲುವಂತೆ ಮನವಿ ವೇಳೆ ಮಾಜಿ ಶಾಸಕ ಪ್ರೀತಮ್ ಗೌಡ ಆಕ್ಷೇಪ ವ್ಯಕ್ತಪಡಿಸಿದ್ದು, ಇದಕ್ಕೆ ತಿರುಗೇಟು ನೀಡಿದ ಪ್ರತಾಪ್ ಸಿಂಹ ಇದೆಲ್ಲವನ್ನೂ ಹಾಸನದಲ್ಲಿ ಇಟ್ಕೋ, ನಮ್ಮಲ್ಲಿ ನಡೆಯಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ. ಇದರಿಂದ ಸಿಟ್ಟಿಗೆದ್ದ ಪ್ರೀತಂ ಗೌಡ ಸುಮ್ಮನಾಗದೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಇಬ್ಬರ ನಡುವಿನ ಮಾತಿನ ವಾಕ್ಸಮರವೇ ನಡೆದಿದೆ.ಈ ವೇಳೆ ಅವರನ್ನು ಸ್ಥಳೀಯ ನಾಯಕರು ಸುಮ್ಮನಾಗಿಸಿದ್ದಾರೆ.
ರಾಜ್ಯ ಪ್ರವಾಸದಲ್ಲಿರುವ ಅಮಿತ್ ಶಾ ಜೊತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವೇದಿಕೆ ಹಂಚಿಕೊಳ್ಳಲಿದ್ದಾರೆ. ನಾಯಕರು ಸುತ್ತೂರು ಜಾತ್ರಾಮಹೋತ್ಸವದಲ್ಲಿ ಭಾಗಿಯಾಗಲಿದ್ದು, ಮೈತ್ರಿ ಬಳಿಕ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಮಾತ್ರವಲ್ಲ ಸಿಎಂ ಸಿದ್ದರಾಮಯ್ಯ ಅವರ ಸ್ವಕ್ಷೇತ್ರದಲ್ಲೆ ವೇದಿಕೆ ಹಂಚಿಕೊಳ್ಳುತ್ತಿರುವುದು ಭಾರಿ ಕುತೂಹಲ ಹೆಚ್ಚಿಸಿದೆ. ಕುಮಾರಸ್ವಾಮಿ ಹಾಗೂ ವಿಜಯೇಂದ್ರರಿಗೆ 5 ನಿಮಿಷ ಭಾಷಣಕ್ಕೆ ಅವಕಾಶ ನೀಡಲಾಗಿದೆ. ಅಮಿತ್ ಶಾ ಹೊರತು ಕೇವಲ ಇಬ್ಬರು ನಾಯಕರುಗಳಿಗೆ ಭಾಷಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಕಾರ್ಯಕ್ರಮ ಮುಗಿದ ಬಳಿಕ ಅಮಿತ್ ಶಾ ಜೊತೆ ಭೋಜನ ಕೂಟ ಕೂಡ ಇರಲಿದೆ ಎಂದು ವರದಿಯಾಗಿದೆ.