ನ್ಯೂಸ್ ನಾಟೌಟ್ : ಶಿಕ್ಷಕನೋರ್ವ ಮಾನಹಾನಿಕಾರಕ ಮೆಸೇಜ್ನ್ನು ಮತ್ತೊಂದು ವಿದ್ಯಾರ್ಥಿನಿಗೆ ಕಳಿಸಿದ್ದಾನೆಂದು ಮನನೊಂದು ವಿದ್ಯಾರ್ಥಿನಿಯೋರ್ವಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಧರ್ಮಸ್ಥಳದಿಂದ ವರದಿಯಾಗಿದೆ.ಧರ್ಮಸ್ಥಳದ ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸಾವಿಗೆ ಶರಣಾದ ಬಾಲಕಿ ಎಂದು ತಿಳಿದು ಬಂದಿದೆ.
ಡ್ರಾಯಿಂಗ್ ಶಿಕ್ಷಕನಾಗಿರುವ ರೂಪೇಶ್ ಪೂಜಾರಿ ಎಂಬಾತ ಮಾನಹಾನಿಕಾರಕ ಮೆಸೇಜ್ ರವಾನಿಸಿ ಕೃತ್ಯವೆಸಗಿದ್ದಾನೆಂದು ತಿಳಿದು ಬಂದಿದೆ. ಮೃತ ವಿದ್ಯಾರ್ಥಿನಿ ಬಗ್ಗೆ ಇನ್ನೋರ್ವ ವಿದ್ಯಾರ್ಥಿನಿಗೆ ಕೆಟ್ಟದಾಗಿ ಮೆಸೇಜ್ ಕಳಿಸಿರುವ ಆರೋಪಿ ವಿರುದ್ಧ ತೀವ್ರವಾಗಿ ಮನನೊಂದಿದ್ದ ಮೃತ ವಿದ್ಯಾರ್ಥಿನಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಗಂಭೀರ ಸ್ಥಿತಿಯಲ್ಲಿದ್ದ ವಿದ್ಯಾರ್ಥಿನಿಯನ್ನು ಕೂಡಲೇ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಯಿತು.ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆಂದು ತಿಳಿದು ಬಂದಿದೆ.
ಮೃತ ವಿದ್ಯಾರ್ಥಿನಿಯ ಅನ್ಯಾಯದ ಸಾವಿನಿಂದ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದೆ. ಆರೋಪಿ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಜರುಗಿಸಿ ಮೃತ ವಿದ್ಯಾರ್ಥಿನಿಗೆ ನ್ಯಾಯ ಒದಗಿಸುವಂತೆ ಪೋಷಕರು, ಸಾರ್ವಜನಿಕರು ಆಗ್ರಹಿಸಿದ್ದಾರೆ. ಸದ್ಯ ಘಟನೆ ಸಂಬಂಧ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಆರೋಪಿ ರೂಪೇಶ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.