ನ್ಯೂಸ್ ನಾಟೌಟ್: ಪಂಚಗೃಹ ಗುರುಲಿಂಗೇಶ್ವರ ಮಠದ ಪೀಠಾಧಿಪತಿ ಆಯ್ಕೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದ್ದು, ಭಕ್ತರು ಹಾಗೂ ಸ್ವಾಮೀಜಿ ನಡುವಿನ ವಿವಾದ ತಾರಕಕ್ಕೇರಿದೆ. ವಿವಾದ ಕೋರ್ಟ್ ನಲ್ಲಿದ್ದಾಗಲೇ ಗಂಗಾಧರ ಸ್ವಾಮೀಜಿ, ಮಠಕ್ಕೆ ಸೇರಿದ ಹೊಲದ ಊಳುಮೆ ಮಾಡಿದ್ದಾರೆ.
ಇದರಿಂದ ಭಕ್ತರ ಆಕ್ರೋಶದ ಕಟ್ಟೆ ಹೊಡೆದಿದ್ದು, ಕಲಾದಗಿ ಗುರುಲಿಂಗೇಶ್ವರ ಮಠದಲ್ಲಿ ಮಹಿಳಾ ಭಕ್ತರಾದಿಯಾಗಿ ಎಲ್ಲರೂ ಪ್ರತಿಭಟನೆಗಿಳಿದಿದ್ದಾರೆ. ಈ ವೇಳೆ ರಂಭಾಪುರಿ ಶ್ರೀ ಕಾರಿನ ಮೇಲೆ ಮಹಿಳೆಯೋರ್ವರು ಚಪ್ಪಲಿ ಎಸೆದ ಘಟನೆ ವರದಿಯಾಗಿದೆ. ರಂಭಾಪುರಿ ಶ್ರೀ ಬಾಗಲಕೋಟೆಯಿಂದ ಕಲಾದಗಿ ಮಾರ್ಗವಾಗಿ ಉದಗಟ್ಟಿ ಗ್ರಾಮಕ್ಕೆ ಅಡ್ಡಪಲ್ಲಕ್ಕಿ ಕಾರ್ಯಕ್ರಮಕ್ಕೆ ತೆರಳುದ್ದ ವೇಳೆ ಭಕ್ತರು, ರಂಭಾಪುರಿ ಶ್ರೀ ಪ್ರಯಾಣಿಸುತ್ತಿದ್ದ ಕಾರನ್ನು ಅಡ್ಡಹಾಕಿ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದ್ದಾರೆ. ಅಲ್ಲದೇ ಈ ವೇಲೆ ಮಹಿಳಾ ಭಕ್ತೆಯೊರ್ವರು ಕಾರಿನ ಮೇಲೆ ಚಪ್ಪಲಿ ಎಸೆದಿದ್ದಾಳೆ.
ಹೀಗಾಗಿ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಕಲಾದಗಿಯಲ್ಲಿ ರಂಭಾಪುರಿ ಶಾಖಾ ಮಠದ ದುರಸ್ತಿಗೆ ಕೆಲವರ ವಿರೋಧದ ವಿಚಾರದ ಬಗ್ಗೆ ಬಾಗಲಕೋಟೆಯಲ್ಲಿ ರಂಭಾಪುರಿ ಜಗದ್ಗುರು ಮಾತನಾಡಿದ್ದು, ಆ ವಿಷಯ ಸಂಬಂಧ ಇಲ್ಲ, ಕಲಾದಗಿಯಲ್ಲಿ ನಮ್ಮ ಕಾರ್ಯಕ್ರಮ ಇಲ್ಲ. ಕಲಾದಗಿಗೆ ನಾವು ಹೋಗುವುದೂ ಇಲ್ಲ.
ಅಭಿವೃದ್ಧಿ ಮಾಡಿದ್ರೆ ಒಳ್ಳೆಯದಲ್ವಾ? ನ್ಯಾಯಾಲಯದ ತೀರ್ಪು ಏನು ಕೊಡುತ್ತೆ ಅದೇ ಅಂತಿಮ. ಅಭಿವೃದ್ಧಿಗೆ ಕುಂಠಿತ ಮಾಡೋದು ಸರಿಯಲ್ಲ. ಧಾರ್ಮಿಕ ಸಂಸ್ಕೃತಿಯನ್ನು ಕೆಲವರು ಕೆಡಿಸುವ ಜನ ಇರ್ತಾರೆ. ಅಂತಹ ವಿಚಾರಗಳಿಗೆ ಅವಕಾಶ ಕೊಡಬಾರದು. ಅದು ರಂಭಾಪುರಿ ಶಾಖಾ ಮಠ ಆಗಿರೋದ್ರಿಂದ ಪೀಠದ ಜಗದ್ಗುರು ಅವರ ನಿರ್ಣಯವೇ ಅಂತಿಮ ಹೊರತು, ಬೇರೆಯವರ ಭಾವನೆಗಳಿಗೆ ಪುರಸ್ಕಾರ ಕೊಟ್ಟಿದ್ದೇ ಈ ಸಮಸ್ಯೆಗೆ ಕಾರಣ ಎಂದು ಸ್ವಾಮೀಜಿ ಹೇಳಿದ್ದಾರೆ.
ವಿವಾದ ಕೋರ್ಟ್ ನಲ್ಲಿದ್ದಾಗಲೇ ಗಂಗಾಧರ ಸ್ವಾಮೀಜಿ ಅವರಿಂದ ಮಠದ ದುರಸ್ತಿ ಮಠದ ಹೊಲದ ಊಳುಮೆಗೆ ಬಕ್ತರು ಆಕ್ರೋಶಗೊಂಡಿದ್ದು, ಗಂಗಾಧರ ಸ್ವಾಮೀಜಿ ಅವರನ್ನು ಮಠದೊಳಗೆ ಬಿಡುವುದಿಲ್ಲ ಎಂದು ಭಕ್ತರು ಪಟ್ಟು ಹಿಡಿದಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಠದ ಮುಂದೆ ಪೊಲೀಸ್ ಬಿಗಿಭದ್ರತೆ ಕೈಗೊಳ್ಳಲಾಗಿದೆ.