27.7 C
Sullia
Sunday, March 8, 2026

ಈ ಬಾರಿ ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ, ಪೊಲೀಸ್ ಆಯುಕ್ತರ ಸೂಚನೆಗಳೇನು? ಇಲ್ಲಿದೆ ಮಾಹಿತಿ..

ನ್ಯೂಸ್ ನಾಟೌಟ್ : ದೀಪಾವಳಿ ಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈ ಹಿನ್ನೆಲೆ ಪಟಾಕಿ ದುರಂತಕ್ಕೆ ಬ್ರೇಕ್ ಹಾಕಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರು ಸೂಚನೆ ನೀಡಿದ್ದಾರೆ.


Ad Widget
Ad Widget
Ad Widget
Ad Widget
Ad Widget
Ad Widget
Ad Widget

ಅಗ್ನಿಶಾಮಕ ಸಿಬ್ಬಂದಿ ಹಾಗೂ ಪಟಾಕಿ ಮಾರಾಟಗಾರರ ಸಭೆಯಲ್ಲಿ ಕಮಿಷನರ್ ಸೀಮಂತ್ ಕುಮಾರ್ ಸಿಂಗ್ ಕಟ್ಟುನಿಟ್ಟಿನ ಕ್ರಮಕ್ಕೆ ಸೂಚನೆಯನ್ನ ನೀಡಿದ್ದಾರೆ. ಪಟಾಕಿ ದುರಂತಗಳು ಆಗದ ಹಾಗೇ ಕಟ್ಟೆಚರ ವಹಿಸಲು ನಿರ್ದೇಶನ ನೀಡಿದ್ದಾರೆ.

ಯಾವುದೇ ಪಟಾಕಿ ಮಾರಾಟಗಾರರಿಗೆ ಮುಂಗಡವಾಗಿ ಪಟಾಕಿ ಸಂಗ್ರಹಕ್ಕೆ ಅವಕಾಶ ಇಲ್ಲ. ಬೇಡಿಕೆ ಹೆಚ್ಚಿದೆ ಎಂದು ಪಟಾಕಿ ಓವರ್ ಲೋಡ್ ಸಂಗ್ರಹ ಮಾಡಿಕೊಂಡಿದ್ದು ಕಂಡು ಬಂದರೆ ಕಾನೂನು ಕ್ರಮದ ಎಚ್ಚರಿಕೆಯನ್ನ ನೀಡಿದ್ದಾರೆ.

ಮಾರಾಟಗಾರರು ದೀಪಾವಳಿ ಹಬ್ಬಕ್ಕೆ 5 ದಿನ ಮುಂಚಿತವಾಗಿ ತಂದು ಐದು ದಿನಗಳ ಒಳಗಾಗಿ ಸ್ಟಾಕ್ ಖಾಲಿ ಮಾಡಿಕೊಳ್ಳಬೇಕು. ಸೆ.18 ರಿಂದ 22ರ ತನಕ ಒಟ್ಟು ಐದು ದಿನ ಪಟಾಕಿ ಮಾರಾಟ ಮಾಡುವುದಕ್ಕೆ ಅವಕಾಶ ಕಲ್ಪಿಸಿಕೊಡಲಾಗುತ್ತದೆ. ಅನಧಿಕೃತವಾಗಿ ಗೋಡೌನ್‌ಗಳಲ್ಲಿ ಪಟಾಕಿ ಸಂಗ್ರಹಣೆ ಬಗ್ಗೆ ಬೀಟ್ ಪೊಲೀಸರು ಪರಿಶೀಲನೆ ನಡೆಸುತ್ತಾರೆ. ಒಂದು ವೇಳೆ ಪಟಾಕಿ ಸಂಗ್ರಹ ಮಾಡಿಕೊಂಡಿರುವುದು ಕಂಡು ಬಂದರೆ ಅಂತಹ ಮಾರಾಟಗಾರರ ವಿರುದ್ಧ ಕಾನೂನು ಕ್ರಮ ಜರಗಿಸಲಾಗುತ್ತದೆ ಸೂಚನೆ ನೀಡಿದ್ದಾರೆ.

Related Articles

LEAVE A REPLY

Please enter your comment!
Please enter your name here

Latest Articles