ನ್ಯೂಸ್ ನಾಟೌಟ್: ಹಿಜಾಬ್ ತಣ್ಣಗಾಗುತ್ತಿದ್ದಂತೆ ಇದೀಗ ನಮಾಜ್ ಹೋರಾಟ ಶುರುವಾಗಿದೆ. ಹೈದರಾಬಾದ್ನ ಕೆವಿ ರಂಗಣ್ಣ ರೆಡ್ಡಿ ಮಹಿಳಾ ಪದವಿ ಕಾಲೇಜಿನಲ್ಲಿ ನಮಾಜ್ಗೆ ಕಾಲೇಜು ಆಡಳಿತ ಮಂಡಳಿ ನಿರಾಕರಿಸಿದೆ. ಇದು ಮುಸ್ಲಿಮ್ ವಿದ್ಯಾರ್ಥಿನಿಯರನ್ನು ಕೆರಳಿಸಿದೆ.
ಹೀಗಾಗಿ ಇಂದು ಮುಸ್ಲಿಮ್ ವಿದ್ಯಾರ್ಥಿನಿಯರು ಕಾಲೇಜು ವಿರುದ್ದ ಭಾರಿ ಪ್ರತಿಭಟನೆ ನಡೆಸಿದ್ದಾರೆ. ಕೆವಿ ರಂಗಣ್ಣ ರೆಡ್ಡಿ ಮಹಿಳಾ ಕಾಲೇಜಿನಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಿದೆ. ಕಳೆದ ವರ್ಷ ಹಿಜಾಬ್ ಗದ್ದಲವೂ ಇಲ್ಲಿ ಹೆಚ್ಚಾಗಿತ್ತು. ಇದೀಗ ಕಾಲೇಜು ತರಗತಿಗಳಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯರು ನಮಾಜ್ ಮಾಡಲು ಆರಂಭಿಸಿದ್ದಾರೆ.
ಮುಸ್ಲಿಮ್ ವಿದ್ಯಾರ್ಥಿನಿಯರ ಈ ನಡೆಯನ್ನು ಕಾಲೇಜು ಆಡಳಿತ ಮಂಡಳಿ ವಿರೋಧಿಸಿದೆ. ಇಷ್ಟೇ ಅಲ್ಲ ನಮಾಜ್ಗೆ ಅವಕಾಶವಿಲ್ಲ ಎಂದು ಎಚ್ಚರಿಕೆ ನೀಡಿದೆ ಎನ್ನಲಾಗಿದೆ. ಆದರೆ ಮುಸ್ಲಿಮ್ ವಿದ್ಯಾರ್ಥಿನಿಯರು ಕಾಲೇಜು ತರಗತಿ ಮತ್ತು ಆವರಣದಲ್ಲಿ ನಮಾಜ್ ಮಾಡಿ ಆಡಳಿತ ಮಂಡಳಿಗೆ ಸೆಡ್ಡು ಹೊಡೆದಿದ್ದಾರೆ. ಇತ್ತ ಕಾಲೇಜಿನ ಶಿಸ್ತು ಸಮಿತಿ ಸದಸ್ಯರು ಕೆಲ ವಿದ್ಯಾರ್ಥಿನಿಯರ ಐಡಿ ಕಾರ್ಡ್ ತೆಗೆದುಕೊಂಡಿದ್ದರೆ.
ನಮಾಜ್ ಮುಂದುವರಿಸಿದರೆ ಅಮಾನತು ಮಾಡುವುದಾಗಿ ಎಚ್ಚರಿಸಿದ್ದಾರೆ. ಇತ್ತ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದ್ದಾರೆ. ಈ ವೇಳೆ ನಮಾಜ್ಗೆ ಅನುಮತಿ ನೀಡಬೇಕು ಎಂದು ಮುಸ್ಲಿಮ್ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಮುಸ್ಲಿಮ್ ವಿದ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ ಕಾಲೇಜು ವಿರುದ್ದ ಆಕ್ರೋಶ ಹೊರಹಾಕಿದ್ದರು. ಹೀಗಾಗಿ ಆಡಳಿತ ಮಂಡಳಿ ಸಮಿತಿಯಲ್ಲಿ ಚರ್ಚಿಸಿ ನಿರ್ಧರಿಸುವುದಾಗಿ ಹೇಳಿತ್ತು. ಇಂದಿನಿಂದ ಮುಸ್ಲಿಮ್ ವಿದ್ಯಾರ್ಥಿನಿಯರು ಕಾಲೇಜು ತರಗತಿಯಲ್ಲಿ ನಮಾಜ್ಗೆ ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದು ಭಾರಿ ಪ್ರತಿಭಟನೆ ನಡೆಸಿದ್ದಾರೆ.